ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ನಮ್ಮೆಲ್ಲರಿಗೂ ಅತ್ಯಂತ ಪವಿತ್ರ ಹಾಗೂ ಮಹತ್ವದ ಹಬ್ಬವಾಗಿದೆ. ಶ್ರೀ ಕೃಷ್ಣನು ಧರ್ಮ, ಸತ್ಯ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದಾನೆ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ನೀಡಿರುವ ಸಂದೇಶಗಳು ಇಂದಿಗೂ ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿವೆ”, ಎಂದು ಚೊಕ್ಕಸಂದ್ರ ವಾರ್ಡಿನ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಜಿಬಿಎ ಆಕಾಂಕ್ಷಿ ಅಭ್ಯರ್ಥಿ ನಾಗರಾಜ್ ಯಾದವ್ ಹೇಳಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಪುನಸ್ಕಾರ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮ ಧರ್ಮಪತ್ನಿ ಮಂಜುಳಾ ನಾಗರಾಜ್ ಯಾದವ್ ಅವರೊಂದಿಗೆ ಭಾಗವಹಿಸಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ಮಾತನಾಡಿದ ಅವರು, “ಶ್ರೀ ಕೃಷ್ಣನ ಜೀವನ ಹಾಗೂ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಪ್ರೀತಿ, ಸಹೋದರತ್ವ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಕೈಜೋಡಿಸಬೇಕು. ಜನ್ಮಾಷ್ಟಮಿಯಂತಹ ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ವಿಶೇಷ ಪೂಜೆ, ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಕೃಷ್ಣನ ಕೃಪೆಗೆ ಪಾತ್ರರಾದರು. ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಸಹಸ್ರಾರು ಭಕ್ತರು, ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಗಮನ ಸೆಳೆದವು.
ಈ ಸಂದರ್ಭದಲ್ಲಿ ಚೋಕ್ಕಸಂದ್ರ ವಾರ್ಡಿನ ಮುಖಂಡರು ಮಹಿಳೆಯರು ಕಾರ್ಯಕರ್ತರು ಉಪಸ್ಥಿತರಿದ್ದು ಶ್ರೀ ಕೃಷ್ಣನ ದರ್ಶನ ಪಡೆದರು.
ವರದಿ : ಅಯ್ಯಣ್ಣ ಮಾಸ್ಟರ್


