ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಇದೀಗ ಪ್ರಯೋಗಾಲಯದ ಪರೀಕ್ಷಾ ವರದಿ ಹೊರಬಿದ್ದಿದೆ. ಪರೀಕ್ಷೆಗೆ ಒಳಪಡಿಸಿದ ನಂದಿನಿ ಮಿಲ್ಕ್ ಪೌಡರ್ ಮಾದರಿಗಳು ಸುರಕ್ಷಿತವಾಗಿವೆ ಎಂದು ವರದಿಯಲ್ಲಿ ದೃಢಪಟ್ಟಿದೆ.
ಇತ್ತೀಚೆಗೆ ನಂದಿನಿ ಹಾಲಿನ ಪುಡಿಯಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಮಿಲ್ಕ್ ಪೌಡರ್‌ನ ಗುಣಮಟ್ಟ ಪರಿಶೀಲಿಸುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದರು.
ಸಚಿವರ ಸೂಚನೆಯಂತೆ ಸೆಪ್ಟೆಂಬರ್ 26ರಂದು ಕೆಎಂಎಫ್ ಡೈರಿಗಳಿಂದ ಮಿಲ್ಕ್ ಪೌಡರ್ ಮಾದರಿಗಳನ್ನು ಸಂಗ್ರಹಿಸಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಮಾನದಂಡಗಳ ಅನ್ವಯ ಪರೀಕ್ಷೆಗೆ ಕಳುಹಿಸಲಾಗಿತ್ತು.


