LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳ : ಸರ್ಕಾರ ಸಮ್ಮತಿ

Advertisement

ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗಳಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅಂತಿಮವಾಗಿ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಹಾಲು ಉತ್ಪಾದನಾ ಹಾಗೂ ನಿರ್ವಹಣಾ ವೆಚ್ಚಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘವು ಸರ್ಕಾರಕ್ಕೆ ತೀವ್ರ ಒತ್ತಡ ಹೇರಿತ್ತು. 

ಆರಂಭದಲ್ಲಿ ಪ್ರತಿ ಲೀಟರ್‌ಗೆ ಬರೋಬ್ಬರಿ 10 ರೂ.ಗಳಷ್ಟು ಏರಿಕೆ ಮಾಡುವಂತೆ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಒಂದು ವೇಳೆ ದರ ಏರಿಕೆ ಮಾಡದಿದ್ದರೆ 'ವಿಧಾನಸೌಧ ಚಲೋ' ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದವು.

ಒಕ್ಕೂಟಗಳ ಈ ಎಚ್ಚರಿಕೆ ಹಾಗೂ ಹಾಲು ಉತ್ಪಾದಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅಂತಿಮವಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡಿದೆ.

ಗ್ರಾಹಕರಿಗೆ ವಿಪರೀತ ಆರ್ಥಿಕ ಹೊರೆಯೂ ಆಗಬಾರದು ಹಾಗೂ ರೈತರಿಗೂ ಮತ್ತು ಉತ್ಪಾದಕರಿಗೂ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಹಾಲಿನ ದರವನ್ನು ಲೀಟರ್‌ಗೆ 4 ರಿಂದ 5 ರೂ.ಗಳವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.

 ಹಾಲು ಉತ್ಪಾದಕ ರೈತರ ಹಿತಾಸಲಿಯನ್ನು ಕಾಪಾಡುವ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದು, ಪರಿಷ್ಕೃತ ದರವು ಶೀಘ್ರದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ