Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

National Press Day: ರಾಷ್ಟ್ರೀಯ ಪತ್ರಿಕಾ ದಿನವನ್ನು ಏಕೆ ಆಚರಿಸಲಾಗುತ್ತದೆ?

Advertisement
ಸೇಡಂ :-ಈ ದಿನಾಚರಣೆಯ ಹಿನ್ನೆಲೆ ಇಲ್ಲಿದೆ

ಪತ್ರಕರ್ತರ ಹಕ್ಕುಗಳು ಮತ್ತು ಗೌರವವನ್ನು ಕಾಪಾಡಿಕೊಳ್ಳಲು ಹಾಗೂ ಭಾರತದಲ್ಲಿ ಸ್ವತಂತ್ರ ಮತ್ತು ಜವಬ್ದಾರಿಯುತ ಪತ್ರಿಕಾ ಅಸ್ತಿತ್ವದ ಸ್ಮರಣಾರ್ಥವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ದಿನಾಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿದುಕೊಳ್ಳೋಣ.

ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಪತ್ರಿಕಾ ಮಾಧ್ಯಮವು ನಮಗೆ ಈ ಜಗತ್ತಿನಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದರ ಕ್ಷಣ ಕ್ಷಣದ ಸುದ್ದಿಗಳನ್ನು ನೀಡುತ್ತದೆ. ನಾವು ಪ್ರತಿದಿನ ಪತ್ರಿಕೆಗಳನ್ನು ಓದುತ್ತೇವೆ ಅಥವಾ ಟಿ.ವಿ, ಸ್ಮಾರ್ಟ್ ಫೋನ್ಗಳಲ್ಲಿ ಸುದ್ದಿಗಳನ್ನು ನೋಡುತ್ತೇವೆ. ರಾಜಕೀಯ, ಕ್ರೀಡೆ, ವಿಜ್ಞಾನ, ಮನೋರಂಜನೆ ಹೀಗೆ ಎಲ್ಲಾ ಕ್ಷೇತ್ರದ ವಿಷಯಗಳ ಬಗ್ಗೆ ಪತ್ರಿಕಾ ಮಾಧ್ಯಮವು ನಮಗೆ ಸುದ್ದಿಯನ್ನು ನೀಡುತ್ತದೆ. ಆದರೆ ಇದು ಸುದ್ದಿ ಕೊಡುವುದಷ್ಟೇ ಅಲ್ಲ, ಮುಖ್ಯವಾಗಿ ಪತ್ರಿಕೋದ್ಯಮವು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ಕಾರ್ಯನಿವರ್ಹಿಸುತ್ತದೆ. ಪತ್ರಿಕಾ ಮಾಧ್ಯಮದ ಗುರಿ ಜನರಿಗೆ ಎದುರಾಗುವ ಯಾವುದೇ ಅನ್ಯಾಯವನ್ನು ಬೆಳಕಿಗೆ ತರುವುದು ಮತ್ತು ಸಾರ್ವಜನಿಕ ವ್ಯವಸ್ಥೆಯ ದುಸ್ಥಿತಿಯನ್ನು ಎತ್ತಿ ತೋರಿಸುವುದಾಗಿದೆ. ಹೀಗೆ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕಾ ಮಾಧ್ಯಮವು ವಹಿಸುವ ಪಾತ್ರದ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿವರ್ಷ ನವೆಂಬರ್ 16 ರಂದು ಭಾರತದಲ್ಲಿ ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಪತ್ರಿಕಾ ದಿನದ ಇತಿಹಾಸ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪ್ರಾರಂಭ:
1956 ರಲ್ಲಿ ಮೊದಲ ಪತ್ರಿಕಾ ಆಯೋಗವು ಪತ್ರಿಕೋದ್ಯಮದ ನೈತಿಕತೆಯನ್ನು ಕಾಪಾಡಿಕೊಳ್ಳುವ ಜವಬ್ದಾರಿಯನ್ನು ಪೂರೈಸುವ ಉದ್ದೇಶದಿಂದ ಶಾಸನಬದ್ಧ ಅಧಿಕಾರವನ್ನು ಹೊಂದಿರುವ ಸಂಸ್ಥೆಯನ್ನು ರಚಿಸಲು ನಿರ್ಧರಿಸಿತು. ಈ ನಿಟ್ಟಿನಲ್ಲಿ 1966, ಜುಲೈ 04 ರಂದು ಪ್ರೆಸ್ ಕೌನ್ಸಿಲ್ ಅನ್ನು ಭಾರತದಲ್ಲಿ ಸ್ಥಾಪಿಸಲಾಯಿತು. ಅದರೆ ಈ ಸಂಸ್ಥೆ ನವೆಂಬರ್ 16, 1966 ರಿಂದ ತನ್ನ ಔಪಚಾರಿಕ ಕೆಲಸವನ್ನು ಪ್ರಾರಂಭಿಸಿತು. ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಈ ಸಂಸ್ಥೆಯ ಸ್ಥಾಪನೆಯ ಸ್ಮರಣಾರ್ಥವಾಗಿ ರಾಷ್ಟ್ರೀಯ ಪತ್ರಿಕಾ ದಿನವನ್ನು ಪ್ರತಿವರ್ಷ ನವೆಂಬರ್ 16 ರಂದು ಆಚರಿಸಲಾಗುತ್ತದೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (PCI):
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಒಂದು ಶಾಸನಬದ್ಧ ಸಂಸ್ಥೆಯಾಗಿದ್ದು, ಇದು ಮಾಧ್ಯಮಗಳ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ಹೊಂದಿದೆ. ಮತ್ತು ಇದು ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಾಗಿರುತ್ತಾರೆ. ಅವರನ್ನು ಹೊರತುಪಡಿಸಿ 28 ಇತರ ಸದಸ್ಯರಿದ್ದಾರೆ, ಅದರಲ್ಲಿ 20 ಮಂದಿ ಪತ್ರಿಕಾ ಮಾಧ್ಯಮದವರು, ಐವರು ಸದಸ್ಯರನ್ನು ಸಂಸತ್ತಿನ ಉಭಯ ಸದನಗಳಿಂದ ನಾಮನಿರ್ದೇಶನ ಮಾಡಲಾಗುತ್ತದೆ ಮತ್ತು ಉಳಿದ ಮೂವರು ಸದಸ್ಯರು ಸಾಂಸ್ಕೃತಿಕ, ಸಾಹಿತ್ಯ ಮತ್ತು ಕಾನೂನು ಕ್ಷೇತ್ರಗಳ ಪ್ರತಿನಿಧಿಗಳಾಗಿದ್ದಾರೆ.

ರಾಷ್ಟ್ರೀಯ ಪತ್ರಿಕಾ ದಿನದ ಮಹತ್ವ:
ಪತ್ರಿಕಾ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ. ಪತ್ರಿಕಾ ಸ್ವಾತಂತ್ರ್ಯವು ಅತೀ ಮುಖ್ಯವಾಗಿದೆ. ಇದು ಸರ್ಕಾರ ಮತ್ತು ನಾಗರಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ದೇಶದ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗೆ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕಾ ಮಾಧ್ಯಮವು ವಹಿಸುವ ಪಾತ್ರದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಅಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ ಪತ್ರಕರ್ತರಿಗೂ ಈ ದಿನ ಗೌರವವನ್ನು ನೀಡಲಾಗುತ್ತದೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ