LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ರಸ್ತೆ ಅಪಘಾತದಲ್ಲಿ ನವಜೋಡಿ ಸಾವು

Advertisement
ಬಳ್ಳಾರಿ : ಬದುಕಿನ ಹೊಸ ಕನಸುಗಳನ್ನು ಹೊತ್ತು ಮದುವೆಯಾದ ತಿಂಗಳಲ್ಲೇ ನವಜೋಡಿಯೊಂದು ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿರುವ ಘಟನೆ ಸಂಭವಿಸಿದೆ.

ಈ ಸಾವು ಕುಟುಂಬಸ್ಥರ ಪಾಲಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಮದುವೆಯ ನಂತರ ಮೊದಲ ಜಾತ್ರೆಗಾಗಿ ತಮ್ಮ ಊರಿಗೆ ಬರಲು ದಂಪತಿ ನಿರ್ಧರಿಸಿದ್ದರು. ಅದರಂತೆ ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾಗ, ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಪವನ್ ಮತ್ತು ರಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರೂ ಯುವಕ-ಯುವತಿಯರಾಗಿದ್ದು, ಬದುಕಿ ಬಾಳಬೇಕಾದ ಜೋಡಿ ಹೀಗೆ ಅರ್ಧದಲ್ಲೇ ಇಹಲೋಕ ತ್ಯಜಿಸಿದ್ದು ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

ಮುಗಿಲು ಮುಟ್ಟಿದ ಆಕ್ರಂದನ

ಜಾತ್ರೆಗೆಂದು ಸಂಭ್ರಮದಿಂದ ಊರಿಗೆ ಮರಳಿ ಬರಬೇಕಾಗಿದ್ದ ನವಜೋಡಿ, ಮರಳಿ ಬಾರದ ಲೋಕಕ್ಕೆ ಪಯಣಿಸಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.

ಜೋಳದ ರಾಶಿ ಗ್ರಾಮದಲ್ಲಿ ಮೃತದೇಹಗಳು ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ. ಸಂತೋಷದ ದಿನಗಳಲ್ಲಿ ಬರಬೇಕಾಗಿದ್ದ ದಂಪತಿಗಳು ಶವವಾಗಿ ಮನೆಗೆ ಬಂದ ದೃಶ್ಯ ನೆರೆದಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ