Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಹಾ ಹಿರೇಮಠ ಹತ್ಯೆ ಪ್ರಕರಣ : ಹುಬ್ಬಳ್ಳಿ-ಧಾರವಾಡ ರಸ್ತೆ ತಡೆದು ವಿದ್ಯಾರ್ಥಿಗಳ ಆಕ್ರೋಶ 

Advertisement
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಡೆಸಿದ್ದಾರೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹುಬ್ಬಳ್ಳಿಯ ಬೇರೆ ಬೇರೆ ಕಾಲೇಜು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು, ಕೊಲೆ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಿ, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹುಬ್ಬಳ್ಳಿ-ಧಾರವಾಡ ರಸ್ತೆ ತಡೆ ನಡೆಸಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ 'ಜಸ್ಟೀಸ್ ಫಾರ್ ನೇಹಾ' ಎಂಬ ಅಭಿಯಾನ ಆರಂಭಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಏಪ್ರಿಲ್ 18ರಂದು ಬಿವಿಬಿ ಕಾಲೇಜು ಆವರಣದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಬೆಳಗಾವಿ ಮುನವಳ್ಳಿ ಮೂಲದ ಫಯಾಜ್ ಎಂಬಾತ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು 12 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ