ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಕಾಲೇಜು ವಿದ್ಯಾರ್ಥಿಗಳ ಕಾಲೇಜು ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಪ್ರವಾಸದ ವೇಳೆ ಸೆಲ್ಫೀ, ರೀಲ್ಸ್ ಚಿತ್ರೀಕರಣಕ್ಕೆ ನಿರ್ಬಂಧ, ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿ ಸೇರಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಪ್ರವಾಸ ಆಯೋಜಿಸುವ ಮೊದಲು ಕಾಲೇಜುಗಳು ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಹಾಗೂ ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ.
ಪ್ರವಾಸದ ವೇಳೆ ಸೆಲ್ಫೀ, ರೀಲ್ಸ್ ಚಿತ್ರೀಕರಣಕ್ಕೆ ನಿರ್ಬಂಧ ಸೇರಿ ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿ ಸೇರಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಪ್ರವಾಸ ಆಯೋಜಿಸುವ ಮೊದಲು ಕಾಲೇಜುಗಳು ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಹಾಗೂ ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸದ ವೇಳೆ ಸೆಲ್ಫೀ ಹಾಗೂ ರೀಲ್ಸ್ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿಗೊಳಿಸಲಾಗಿದೆ.
ಪ್ರವಾಸಕ್ಕೆ ತೆರಳುವ ಮುನ್ನವೇ ವಿದ್ಯಾರ್ಥಿಗಳಿಗೆ ಸೆಲ್ಫೀ, ರೀಲ್ಸ್ ಮಾಡದಂತೆ ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಅಧ್ಯಾಪಕರು ನಿಗಾ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.


