ಬೀದರ ದಕ್ಷಿಣ :ಉಡಮನಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ನೆರವೇರಿತು. ಅಧ್ಯಕ್ಷರಾಗಿ ಚಂದ್ರಶೇಖರ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಶಿವಶಂಕರ ಪಾಟೀಲ ಆಯ್ಕೆಯಾಗಿದ್ದಾರೆ.
ಸಂಘದ ಸದಸ್ಯರಾದ ಪ್ರಭು ನೆಲವಾಲ, ರಾಘವೇಂದ್ರ, ಗಂಗಾರೆಡ್ಡಿ, ಕಲಾವತಿ, ಸುಧಾಕರ ನಿಂಗನಾಯಕ, ಅಶೋಕ ಸೆವತ್ಕರ, ಬಾಬುರಾವ ಭೈರೆ ಸೇರಿದಂತೆ ಯುವ ಮುಖಂಡರಾದ ಸಚಿನ್ ಪಾಟೀಲ, ಅಮರ ಮಂಗಡಿಕರ, ಸಿದ್ದು, ಶರಣಪ್ಪ ಪಾಟೀಲ ಹಾಗೂ ಗ್ರಾಮದ ಹಿರಿಯರು ಮತ್ತು ಯುವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಚಂದ್ರಶೇಖರ ಪಾಟೀಲ, “ರೈತರ ಏಳಿಗೆಗಾಗಿ ಸ್ಥಾಪನೆಯಾದ ಈ ಸಹಕಾರ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತೇನೆ. ಗ್ರಾಮದ ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಂಡು, ರೈತರ ಹಾಗೂ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಈ ಜವಾಬ್ದಾರಿಯನ್ನು ನೀಡಿದ ಎಲ್ಲರಿಗೂ ನಾನು ಋಣಿಯಾಗಿದ್ದೇನೆ” ಎಂದು ಹೇಳಿದರು.
ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆಯಿಂದ ಗ್ರಾಮದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ಸಹಕಾರ ಕ್ಷೇತ್ರದ ಮೂಲಕ ರೈತರು ಮತ್ತು ಗ್ರಾಮಾಭಿವೃದ್ಧಿಗೆ ಹೊಸ ಚೈತನ್ಯ ದೊರೆಯುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ ಎಂದು ಯುವ ಮುಖಂಡ ಸಚಿನ ಪಾಟೀಲ ತಿಳಿಸಿದ್ದಾರೆ.
ವರದಿ : ಸಂತೋಷ ಬಿಜಿ ಪಾಟೀಲ


