LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ₹18 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್‌.ಎನ್. ಸುಬ್ಬಾರೆಡ್ಡಿ ಚಾಲನೆ

Advertisement
ಚೇಳೂರು : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ. ಈ ನಿಟ್ಟಿನಲ್ಲಿ ಬಿಳ್ಳೂರಿನಿಂದ ಚಾಕವೇಲು ವರೆಗಿನ ರಸ್ತೆ ಅಭಿವೃದ್ಧಿಗೆ ಒಟ್ಟು 18 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ ಎಂದು ಶಾಸಕ ಎಸ್‌.ಎನ್. ಸುಬ್ಬಾರೆಡ್ಡಿ ಹೇಳಿದರು.

ತಾಲ್ಲೂಕಿನ ಉಗ್ರಾಣಪಲ್ಲಿಯಿಂದ ರಾಶ್ಚೇರವು ಹಾಗೂ ಚಾಕವೇಲು ಗ್ರಾಮದವರೆಗೆ ₹5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಅನುದಾನ ಹಂಚಿಕೆ ವಿವರ: ಈ ರಸ್ತೆ ಯೋಜನೆಯ ಒಟ್ಟು ವೆಚ್ಚದ ಕುರಿತು ಮಾಹಿತಿ ನೀಡಿದ ಶಾಸಕರು, ವಿವಿಧ ಹಂತಗಳಲ್ಲಿ ಅನುದಾನ ಹಂಚಿಕೆಯಾಗಿರುವುದನ್ನು ವಿವರಿಸಿದರು. ಚಾಕವೇಲು ಗ್ರಾಮದ ವ್ಯಾಪ್ತಿಗೆ ₹5 ಕೋಟಿ, ಬಿಳ್ಳೂರಿನಿಂದ ಉಗ್ರಾಣಪಲ್ಲಿ ವರೆಗೆ ₹3.5 ಕೋಟಿ, ರಾಶ್ಚೇರವು ಮಾರ್ಗಕ್ಕೆ ₹4.5 ಕೋಟಿ ಹಾಗೂ ಇತರೆ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ₹4.75 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಸರಿಯಾದ ಅನುದಾನ ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸಿದ್ದರು. ಈಗ ನಮ್ಮ ಸರ್ಕಾರ ಬಂದ ಮೇಲೆ ಗರಿಷ್ಠ ಅನುದಾನ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಶೇ. 75 ರಿಂದ 80 ರಷ್ಟು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಅವರು ತಿಳಿಸಿದರು.

ಹೆಚ್ಚುವರಿ ಅನುದಾನ: ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ₹50 ಕೋಟಿ ಹಣ ಬರಲಿದ್ದು, ಅದನ್ನು ಬಳಸಿಕೊಂಡು ಕ್ಷೇತ್ರದ ಉಳಿದ ಎಲ್ಲಾ ರಸ್ತೆಗಳನ್ನು ಸುಗಮಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕರು ಶ್ರೀನಿವಾಸ್ ಎಂ, ವಕೀಲರಾದ ಚಂದ್ರಶೇಖರ್, ಸಹದೇವ ರೆಡ್ಡಿ, ಜೆ ಎನ್ ಜಾಲರಿ, ಜಿವಿ ಸುರೇಂದ್ರ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ