Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ ಸಾಲ ಮಾತ್ರ: CM ಸಿದ್ಧರಾಮಯ್ಯ

Advertisement
ಬೆಂಗಳೂರು:ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು, ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಆರೋಪಿಸಿದರು.

ಈ ಕುರಿತು ಸೋಮವಾರ ನಡೆದ ವಿಧಾನಸಭೆ ಸದಸದಲ್ಲಿ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್‌ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ ಎಂದರು. ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020 ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋಧಿಸಿದ್ದೀರಿ ಹರಿಹಾಯ್ದರು.

ರಾಜ್ಯಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ