Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Advertisement
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಸಾರ್ವಜನಿಕರಿಂದ ಕೆಲವು ಅನಾಮಧೇಯ ವ್ಯಕ್ತಿಗಳು ಹಣ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ. ಈ ಕುರಿತು ಪ್ರಸ್ತುತ ಸಾಕ್ಷ್ಯಾಧಾರಗಳು ಸಹ ಲಭ್ಯವಾಗಿವೆ. ಈ ಕುರಿತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಮೇತ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಪ್ರಸ್ತುತ ಯಾವುದೇ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲಿರುವುದಿಲ್ಲ. ಹಾಗೇನಾದರೂ ನೇಮಕಾತಿ ಇದ್ದಲ್ಲಿ ಸಕ್ಷಮ ಪ್ರಾಧಿಕಾರದ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ನೇಮಕಾತಿ ಆಮಿಷಕ್ಕೆ ಒಳಗಾಗದೇ, ಯಾವುದೇ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಕೋರಿದ್ದಾರೆ.

ಪ್ರತೀಕ್ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ