ಬೆಂಗಳೂರು: ಸಹಕಾರ ಬ್ಯಾಂಕ್‌ಗಳ ಮೂಲಕ ಪಡೆದ ರೈತರ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸುವೆ.
ಆದರೆ, ಸದ್ಯ ಸಹಕಾರ ಬ್ಯಾಂಕ್‌ಗಳ ಮೂಲಕ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಡಿಸಿಸಿ ಬ್ಯಾಂಕ್, ಪಿಕಾರ್ಡ್ ಬ್ಯಾಂಕ್‌ಗಳಲ್ಲಿ ಇದೇ ಜುಲೈ ಅಂತ್ಯಕ್ಕೆ 33,07,384 ರೈತರು 31028.58 ಕೋ. ರೂ. ಬೆಳೆ ಸಾಲ ಪಡೆದು ಹೊರ ಬಾಕಿ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಗರಿಷ್ಠ 4,96,354 ರೈತರು 3,783.31 ಕೋ.ರೂ.ಗಳ ಸಾಲ ಪಡೆದಿದ್ದು, ಬೆಂಗಳೂರು ನಗರದಲ್ಲಿ ಅತಿ ಕಡಿಮೆ ಅಂದರೆ 10,123 ರೈತರು 145.20 ಕೋ. ರೂ. ಸಾಲ ಪಡೆದಿದ್ದಾರೆ ಎಂದರು.


