LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ಈ ವರ್ಷ ನರ್ಸಿಂಗ್‌ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ : ಶರಣ ಪ್ರಕಾಶ ಪಾಟೀಲ

Advertisement

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.


ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಈ ಮೂಲಕ ಖಾಸಗಿ ನರ್ಸಿಂಗ್ ಕಾಲೇಜುಗಳಿಗೆ ಸಂದೇಶ ನೀಡಿರುವ ಸಚಿವರು, ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದರು.

ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ಮತ್ತು ಸ್ವೀಕಾರಾರ್ಹವಾಗುವುದಿಲ್ಲ ಎಂದು ತಿಳಿಸಿದರು.

ಸರ್ಕಾರಿ ಕೋಟಾದಡಿಯಲ್ಲಿ 10,000 ರೂ., ಇತರೆ ಕೋಟಾದಡಿಯಲ್ಲಿ 1 ಲಕ್ಷ ರೂ. ಮತ್ತು ಕರ್ನಾಟಕೇತರ ವಿದ್ಯಾರ್ಥಿಗಳಿಗೆ 1.4 ಲಕ್ಷ ರೂ. ಶುಲ್ಕ ರಚನೆಯೇ ಈ ವರ್ಷವೂ ಮುಂದುರಿಯಲಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್