LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ 

Advertisement

ಬೆಂಗಳೂರು : ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. 

ಸಾರಿಗೆ ನಿಗಮಗಳು ಭಾರಿ ನಷ್ಟ ಅನುಭವಿಸುತ್ತಿದ್ದು, ಅವುಗಳನ್ನು ಉಳಿಸುವ ದೃಷ್ಟಿಯಿಂದ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ವಿಚಾರವಾಗಿ ಸರ್ಕಾರವನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಡೀಸೆಲ್ ಬೆಲೆ ಹೆಚ್ಚಳವಾದಾಗ ಯಾರೂ ಏಕೆ ಪ್ರಶ್ನಿಸಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಡೀಸೆಲ್ ಹಾಕಲೂ ಹಣವಿರಲಿಲ್ಲ!

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟದ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಾರಿಗೆ ನಿಗಮಗಳು ಸಾಕಷ್ಟು ನಷ್ಟ ಅನುಭವಿಸುತ್ತಿವೆ. ಒಂದು ಹಂತದಲ್ಲಿ ಬಸ್‌ಗಳಿಗೆ ಡೀಸೆಲ್ ಹಾಕಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿಸಿದ್ದಾರೆ.

ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವುದರಿಂದ ಸಾರಿಗೆ ಸಂಸ್ಥೆಗಳ ನಿರ್ವಹಣಾ ವೆಚ್ಚವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ