Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ದ ಸೇರಿದಂತೆ ಇಬ್ಬರನ್ನು ತುಳಿದು ಸಾಯಿಸಿದ ಆನೆ

Advertisement
ಬಲರಾಂಪುರ, ಉತ್ತರ ಪ್ರದೇಶ: ಜಿಲ್ಲೆಯ ರಾಮಾನುಜಗಂಜ್ ಅರಣ್ಯ ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ವಿಪರೀತವಾಗಿ ಹೆಚ್ಚಳವಾಗಿದೆ. ಆನೆ ದಾಳಿಗೆ 24 ಗಂಟೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಆನೆ ಮಹಿಳೆಯನ್ನು ತುಳಿದು ಕೊಂದು ಹಾಕಿತ್ತು. ಇನ್ನು ವೃದ್ಧರೊಬ್ಬರು ಸಹ ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆರಾಮಾನುಜಗಂಜ್ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಫುಲ್ವಾರ್ ಗ್ರಾಮದ ಹೊಲದಲ್ಲಿ ಗೋಧಿ ಕೊಯ್ಲು ಮಾಡುತ್ತಿದ್ದ ದಂಪತಿ ಮೇಲೆ ಆನೆ ಏಕಾಏಕಿ ದಾಳಿ ಮಾಡಿದೆ. ಪತಿಯನ್ನು ರಕ್ಷಿಸಲು ಪತ್ನಿ ಮುಂದೆ ಬಂದಿದ್ದಾರೆ. ಈ ವೇಳೆ ಮುಂದೆ ಬಂದ ಅವರನ್ನೇ ಆನೆ ತುಳಿದು ಸಾಯಿಸಿದೆ.

ಆನೆಯಿಂದ ನಜ್ಜುಗುಜ್ಜಾದ ವೃದ್ಧ: ಜಿಗ್ಡಿ ಬಾಸೆನ್‌ನ ನಿವಾಸಿ ದುರ್ಗಾ ಪ್ರಸಾದ್ ಸಿಂಗ್ ಅವರು ಸೋಮವಾರ ರಾತ್ರಿ ಮಹಾವೀರ್‌ಗಂಜ್‌ನಿಂದ ಹಿಂತಿರುಗುತ್ತಿದ್ದರು. ಆಗ ಇದ್ದಕ್ಕಿದ್ದಂತೆ ರಾಂಪುರದ ಸಿಂಧೂರ್ ನದಿಯ ದಡದಲ್ಲಿರುವ ಕಾಡಿನ ಮಧ್ಯದ ಹೊಲದಲ್ಲಿದ್ದ ಆನೆ ದಾಳಿ ಮಾಡಿದೆ. ಘಟನೆಯಲ್ಲಿ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಗಳಿಗೆ ಅರಣ್ಯ ಇಲಾಖೆ ತಕ್ಷಣ ಆರ್ಥಿಕ ನೆರವು ನೀಡಿದೆ. ಆನೆ ಪೀಡಿತ ಪ್ರದೇಶಗಳಲ್ಲಿ ಓಡಾಡದಂತೆ ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜನರಿಗೆ ಸಲಹೆ ನೀಡಲಾಗುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಅನಾವಶ್ಯಕವಾಗಿ ಕಾಡಿನ ಕಡೆಗೆ ಹೋಗಬೇಡಿ ಎಂದು ಮನವಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ