LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ 

Advertisement

ಕೊಪ್ಪಳದ ಗವಿ ಮಠದ ಗವಿಸಿದ್ದೇಶ್ವರ ಶ್ರೀಗಳಿಗೆ ಮೈಸೂರು ದಸರಾ ಉದ್ಘಾಟನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

ಕೊಪ್ಪಳದ ಗವಿ ಮಠಕ್ಕೆ ತೆರಳಿದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಇತರ ನಾಯಕರು ಗವಿಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ನೀಡಿದರು.

ಈ ವೇಳೆ ಶ್ರೀಗಳು ಬಹಳ ಸಂತೋಷದಿಂದಲೇ ಸರ್ಕಾರದ ಆಹ್ವಾನವನ್ನು ಒಪ್ಪಿದ್ದು, ದಸರಾ ಉದ್ಘಾಟನೆಗೆ ಬರುವುದಗಿ ತಿಳಿಸಿದ್ದಾರೆ.

ದಸರಾ ಉದ್ಘಾಟನೆಗೆ ಬರಲು ನಿರಾಕರಿಸಿರುವುದಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗಿದ್ದ ಸುಳ್ಳು ಸುದ್ದಿ ವಿರುದ್ಧ ಕೊಪ್ಪಳ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಗವಿಸಿದ್ದೇಶ್ವರ ಮಠದ ಶ್ರೀಗಳ ಬಗ್ಗೆ ಕಿಡಿಗೇಡಿಗಳು ಹಬ್ಬಿಸಿರುವ ಸುಳ್ಳು ಸುದ್ದಿ ಹಾಗೂ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಡಿಜಿಟಲ್​ ಚಾನೆಲ್​​ವೊಂದರ ವಿರುದ್ದ ಕೊಪ್ಪಳ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಶ್ರೀಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಅಪಪ್ರಚಾರ ಮಾಡಲಾಗುತ್ತಿದೆ.

 ಈ ಬಾರಿಯ ದಸರಾ ಮಹೋತ್ಸವವನ್ನು ಗವಿಮಠದ ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ಅಧಿವೇಶನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದರು.

 ಆದರೆ, 'ಶ್ರೀಗಳು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ, ಕಾರ್ಖಾನೆಗಳ ವಿಚಾರವಾಗಿ ಕೊಪ್ಪಳವನ್ನು ರಕ್ಷಣೆ ಮಾಡಿದರೆ ಮಾತ್ರ ಉದ್ಘಾಟನೆಗೆ ಬರುವುದಾಗಿ ಶ್ರೀಗಳು ಸರ್ಕಾರಕ್ಕೆ ಷರತ್ತು ವಿಧಿಸಿದ್ದಾರೆ' ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ಗೆ 223 ರನ್ ಗಳ ಸುಲಭ ಗೆಲುವು ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು: ರೈತರ ಮನವಿಮಾನ್ವಿಯಲ್ಲಿ ಭವ್ಯ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಶೀಘ್ರ ಕ್ರಮ: ಎನ್.ಎಸ್ ಬೋಸರಾಜುಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆ ವೇಳೆ ತಲೆ ಮೇಲೆ ಕೈ ಇಟ್ಟು ಕುಳಿತ ದರ್ಶನ್ಸಚಿವ ಲಕ್ಷ್ಮಣ ಸವದಿಗೆ ಸಮನ್ಸ್‌ ಜಾರಿ : ಖುದ್ದು ಹಾಜರಾಗಲು ಕೋರ್ಟ್​​​​​ಗೆ ಆದೇಶ ವಿಜಯೇಂದ್ರ ಕ್ಷೇತ್ರದಿಂದಲೇ ಭಾರತ್ ಜೋಡೋ-2 ಪಾದಯಾತ್ರೆ: ಬಿ.ಕೆ.ಹರಿಪ್ರಸಾದ್ ಘೋಷಣೆ ರಾಜನಾಥ್ ಸಿಂಗ್ ಭೇಟಿಯಾದ ಡಿ.ಕೆ ಶಿವಕುಮಾರ್ : ಪ್ರಮುಖ ಬೇಡಿಕೆಗಳ ಕುರಿತು ಮನವಿ ಡಿವೋರ್ಸ್ ಗೆ ವಿರೋಧ : ಪತಿ ಮನೆ ಮುಂದೆ ನಾಲ್ಕು ದಿನಗಳಿಂದ ಧರಣಿ ಕುಳಿತ ಪತ್ನಿರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು:ನೀರಮಾನ್ವಿ ಗ್ರಾಮದ ರೈತರ ಮನವಿಕಿತ್ತೂರ ಉತ್ಸವದ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ : ಸಚಿವ ಸತೀಶ ಜಾರಕಿಹೊಳಿ