Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಪ್ತಚರ ಮಾಹಿತಿ ಮೇರೆಗೆ ಉಗ್ರರ 9 ಅಡಗುತಾಣ ದ್ವಂಸ: ಕರ್ನಲ್ ಖುರೇಷಿ

Advertisement
ನವದೆಹಲಿ: ಪಹಲ್ಗಾಮ್​ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ 9 ಅಡಗುತಾಣಗಳ ಮೇಲೆ ಭಾರತೀಯ ಸೇನೆಯು ದಾಳಿ ​ನಡೆಸಿದೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಲ್ ಸೋಫಿಯಾ ಖುರೇಷಿ ಅವರು ಕಾರ್ಯಾಚರಣೆ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ಕುರಿತು ಬುಧವಾರ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್​ ಮಿಸ್ತ್ರಿ, ಕರ್ನಲ್​ ಸೋಫಿಯಾ ಖುರೇಶಿ ಮತ್ತು ವಿಂಗ್​ ಕಮಾಂಡರ್​ ವ್ಯುಮಿಕ ಸಿಂಗ್​ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿದರು.

ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಮಿಲಿಟರಿ ಆಪರೇಷನ್​ ಸಿಂಧೂರ​ ಹೆಸರಿನಲ್ಲಿ 9 ಉಗ್ರರ ತಾಣ ಮತ್ತು ತರಬೇತಿ ಸೌಲಭ್ಯ ಶಿಬಿರದ ಮೇಲೆ ದಾಳಿ ನಡೆಸಿದೆ. ಗಡಿಯಾಚೆಗಿನ ಭಯೋತ್ಪಾದನೆಯ ನೇರ ಸಂಪರ್ಕದ ಸಂಬಂಧ ಕುರಿತು ನಿಖರ ಗುಪ್ತಚರ ಮಾಹಿತಿ ಆಧಾರದ ಮೇಲೆ ಎಚ್ಚರಿಕೆಯಿಂದ ಈ ದಾಳಿ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಹಿಂದೆ ಭಾರತದ ವಿರುದ್ಧ ಭಯೋತ್ಪಾದಕ ದಾಳಿ ರೂಪಿಸಿ, ನಡೆಸಿದ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ. ಲಾಹೋರ್‌ನಿಂದ ಸುಮಾರು 40 ಕಿಲೋಮೀಟರ್ ಉತ್ತರದಲ್ಲಿರುವ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ತರಬೇತಿ ನೆಲೆಯೂ ಸೇರಿದಂತೆ ಇತರೆಡೆ ಆಪರೇಷನ್​ ನಡೆದಿದೆ. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯ ರೂವಾರಿಗಳಾದ ಅಜ್ಮಲ್​ ಕಸಬ್​​ ಮತ್ತು ಡೇವಿಡ್​​ ಹೆಡ್ಲಿ ಇಲ್ಲಿಂದಲೇ ತರಬೇತಿ ಪಡೆದಿದ್ದರು ಎಂದು ಮಾಹಿತಿ ನೀಡಿದರು.

ಪಹಲ್ಗಾಮ್​ನಂತಹ ಗಡಿಯಾಚೆಗಿನ ದಾಳಿಗಳಿಗೆ ಭಾರತವು ತಕ್ಕ ಉತ್ತರ ನೀಡಿದೆ ಎಂದು ಸರ್ಕಾರ ತಿಳಿಸಿದೆ. ಭಾರತ ಭಯೋತ್ಪಾದಕರ ನೆಲೆಗಳನ್ನು ಕೆಡವಲು ಮತ್ತು ನಿಷ್ಕ್ರಿಯಗೊಳಿಸುವುದರ ಮೇಲೆ ಈ ದಾಳಿಯು ಕೇಂದ್ರೀಕರಿಸಿದೆ ಎಂದರು.

ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ