Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.15 ರಂದು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Advertisement
ಚಿಕ್ಕೋಡಿ : ಸಂಸದೆ ಪ್ರಿಯಾಂಕಾ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದಲ್ಲಿ 2024-2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.15ರಂದು ಚಿಕ್ಕೋಡಿ ಪಟ್ಟಣದ ಇಂದಿರಾ ನಗರದ ಹತ್ತಿರ ಇರುವ ಸಂಸದರ ಕಚೇರಿಯಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ ಎಂದು ಬೆಳಗಾವಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು.

ಸಂಸದರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಹತ್ತು ವಿಧಾನಸಭಾ ಕ್ಷೇತ್ರದಲ್ಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಮೊದಲನೆ, ದ್ವಿತೀಯ ಹಾಗೂ ಮೂರನೆ ಸ್ಥಾನ ಪಡೆದಿರುವ ಒಟ್ಟು 100 ವಿದ್ಯಾರ್ಥಿಗಳನ್ನು ಯುವ ಸಂಸದರು ಸನ್ಮಾನಿಸಿ ಅವರಿಗೆ ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಹಾಗೂ ಬುಡಾ ಅಧ್ಯಕ್ಷ ಲಕ್ಷಣರಾವ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ಚಿಕ್ಕೋಡಿ ಡಿಡಿಪಿಯು ಪಾಂಡುರಂಗ ಭಂಡಾರಿ, ಡಿಡಿಪಿಐ ಆರ್.ಎಸ್. ಸೀತಾರಾಮು, ಮಜಲಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಚೌಗಲಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ,ಪ್ರಭಾಕರ ಕೋರೆ, ಕೆಪಿಸಿಸಿ ಸದಸ್ಯ ರಾಜು ಕೋಟಗಿ, ರಾಮಕೃಷ್ಣ ಪಾನಗೂಡೆ,ಫಿರೋಜ ಕಲಾವಂತ ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ