Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ.೧೫ ರಂದು ಸಂಗೊಳ್ಳಿ ರಾಯಣ್ಣ ಜಯಂತಿ:ಸರ್ವ ಜನಾಂಗದ ಜನರು ಭಾಗಿ

Advertisement
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

ಭಾಲ್ಕಿ: ಪಟ್ಟಣದಲ್ಲಿ ಇದೇ ಆ.೧೫ ರ ಸ್ವಾತಂತ್ರದಿನೋತ್ಸವದAದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಜಯಂತಿ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಗೊಳ್ಳಿರಾಯಣ್ಣ ಜಯಂತಿ ಮಹೋತ್ಸವದ ಗೌರವಾಧ್ಯಕ್ಷ ಕೆ.ಡಿ.ಗಣೇಶ ಹೇಳಿದರು.



ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತಿ ಮಹೋತ್ಸವದ ಪೂರ್ವಭಾವಿ ಸಭೆಯ ನಿಮಿತ್ಯ ರವಿವಾರ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಯಾವುದೇ ಜ್ಯಾತಿ, ಮತ, ಧರ್ಮಕ್ಕೆ ಸೀಮಿತರಲ್ಲ, ಅವರು ದೇಶದ ವೀರ ಪುತ್ರರಾಗಿದ್ದರು. ಅವರ ಜಯಂತಿ ಮಹೋತ್ಸವ ಆ.೧೫ ರ ಸ್ವಾತಂತ್ರ ದಿನೋತ್ಸವದಂದು ಸಂಗೊಳ್ಳಿ ರಾಯಣ್ಣ ವೃತ್ತದ ಹತ್ತಿರ ಅದ್ಧೂರಿಯಾಗಿ ಆಚರಿಸಲಾಗುವುದು. ಈ ನಿಮಿತ್ಯ ಸಂಗೊಳ್ಳಿ ರಾಯಣ್ಣ ಜಯಮತಿ ಮಹೋತ್ಸವ ಉತ್ಸವ ಸಮಿತಿಯ ಯುವಕರು ಈಗಾಗಲೇ ಪಟ್ಟಣವನ್ನು ಹಳದಿ ತೋರಣಗಳಿಂದ ಅಲಂಕರಿಸಿದ್ದಾರೆ. ಎಲ್ಲಾ ಯುವಕರು ಜಯಂತಿ ಮಹೊತ್ಸವ ಅತಿ ವಿಜ್ರಂಭಣೆಯಿAದ ಆಚರಿಸುವಲ್ಲಿ ಉತ್ಸುಕರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉತ್ಸವಸಮಿತಿಯ ಕಾರ್ಯದರ್ಶಿ ಬಾಲಾಜಿ ಖೇಡಕರ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಜಯಂತಿ ಮಹೋತ್ಸವ ನಿಮಿತ್ಯ ಪೂರ್ವಭಾವಿಯಾಗಿ ಆ.೧೨ ರಂದು ನೂರಾರು ಯುವಕರು ಬೈಕ್ ರ‍್ಯಾಲಿ ನಡೆಸುವರು. ಬೈಕ್ ರ‍್ಯಾಲಿಯು ಸಂಗೊಳ್ಳಿರಾಯಣ್ಣ ವೃತ್ತದಿಂದ ಪ್ರಾರಂಭವಾಗಿ, ಬೊಮ್ಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಡಾ| ಬಿ.ಆರ್.ಅಂಬೇಡ್ಕರ್ ವೃತ್ತ, ಮಹಾತ್ಮಾಗಾಂಧಿ ವೃತ್ತ, ಸುಭಾಷಚಂದ್ರ ಭೋಸ್ ವೃತ್ತ, ಶಿವಾಜಿ ವೃತ್ತ, ಬಸವೇಶ್ವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ಕನಕದಾಸ ವೃತ್ತದ ಮೂಲಕ ಸಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಯೇ ಸಮಾವೇಶ ಗೊಳ್ಳುವುದು ಎಂದು ತಿಳಿಸಿದರು.


ಮುಖಂಡರಾದ ಸಂಜೀವಕುಮಾರ ಗುಂಜರಗೆ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಮಹೋತ್ಸವಕ್ಕೆ ಜಿಲ್ಲಾ ಉತ್ಸುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡುವರು. ಹಿರೇಮಠ ಸಂಸ್ಥಾನ ಭಾಲ್ಕಿಯ ಹಿರಿಯ ಸ್ವಾಮೀಜಿ ನಾಡೋಜ ಡಾ| ಬಸವಲಿಂಗ ಪಟ್ಟದ್ದೇವರು, ತಿಂಥಣಿ ಮಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರದಮದಲ್ಲಿ ಸಂಸದ ಸಾಗರ ಖಂಡ್ರೆ, ಸೇರಿದಂತೆ ನಮ್ಮ ನಾಡಿನ ಸಮಾಜ ಮುಖಂಡರು ಮತ್ತು ರಾಜಕೀಯ ವ್ಯಕ್ತಿಗಳು ಪಾಲ್ಗೊಳ್ಳುವರು, ಉತ್ತಮ ವಕ್ತಾರರಿಂದ ವಿಶೇಷ ಉಪನ್ನಾಸ ನಡೆಸಲಾಗುವುದು ಎಂದು ತಿಳಿಸಿದರು.



ಈ ಸಂದರ್ಭದಲ್ಲಿ ಪ್ರಮುಖರಾದ ಉತ್ಸವ ಸಮಿತಿಯ ಅಧ್ಯಕ್ಷ ಲೋಕೇಶ ಗೊಧೆ, ಬಾಲಾಜಿ ಜಬಾಡೆ, ಪಂಢರಿ ಮೇತ್ರೆ, ಮಲ್ಲಿಕಾರ್ಜುನ ಮೂಲಗೆ, ಶಾಲಿವಾನ ಗೋಧೆ, ಮಲ್ಲಿಕಾರ್ಜುನ ಮೇತ್ರೆ, ಭೀಮ ನೆಲವಾಡೆ, ಸಚಿನ ಮಳಚಾಪೂರೆ ಸೇರಿದಂತೆ ಹಲವರು ಇದ್ದರು.

ವರದಿ:ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ