Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋಳಿ ಹಬ್ಬದ ದಿನ ಕೂಲೆಯಾದ ಮೂವರು ಬಿಹಾರಿಗಳು

Advertisement
ಬೆಂಗಳೂರು : ಹೋಳಿ ಹಬ್ಬದ ಸಂಭ್ರಮವು ಹುಚ್ಚಾಟಕ್ಕೆ ತಿರುಗಿ ಮೂವರ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಬಿಹಾರ ಮೂಲದ ಅನ್ಸು(22) ರಾಧೆ ಶ್ಯಾಮ್(23) ಹಾಗೂ ದೀಪು ಮೃತ ದುರ್ದೈವಿಗಳಾಗಿದ್ದಾರೆ.

ಬಿಹಾರ ಮೂಲದ 6 ಮಂದಿ ಕೂಲಿ ಕಾರ್ಮಿಕರು ನಿನ್ನೆಯಿಂದ ಹೋಲಿ ಆಚರಣೆಯಲ್ಲಿ ತೊಡಗಿಕೊಂಡಿದ್ದರು.ಬಳಿಕ ಮದ್ಯಸೇವನೆ ಮಾಡಿ ಸರ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಫೋರ್‌ ವಾಲ್‌ ಕಟ್ಟಡದಲ್ಲಿ ಮಲಗಲೆಂದು ತೆರಳಿದ್ದರು.

ಈ ವೇಳೆ ಅವರವರಲ್ಲೇ ಜಗಳ ನಡೆದಿತ್ತು. ಕುಡಿದ ಅಮಲಿನಲ್ಲಿದ್ದ ಯುವಕರು ಮೂವರನ್ನು ಹತ್ಯೆಗೈದಿದ್ದಾರೆ. ಮೂರನೇ ಮಹಡಿಯಲ್ಲಿ ಒಂದು ಕೋಣೆಯಲ್ಲಿ ಎರಡು ಶವ ಮತ್ತೊಂದು ಕೋಣೆಯಲ್ಲಿ ಒಂದು ಶವ ಪತ್ತೆಯಾಗಿದೆ.

ಕೂಡಲೇ ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಓರ್ವ ಅಪರಾಧಿಯನ್ನು ವಶಕ್ಕೆ ಪಡೆದಿದ್ದಾರೆ. ಮಿಕ್ಕ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಫೋರೆನ್ಸಿಕ್‌ ತಜ್ಞರು ಹಾಗೂ ಶ್ವಾನದಳದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪರಾಧಿಗಳ ಜಾಡು ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಸಿ.ಕೆ ಬಾಬಾ ಮಾತನಾಡಿ, ಇದೊಂದು 14 ಮಹಡಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದೆ. ಸಂಜೆಯಷ್ಟೇ ಈ ಬಗ್ಗೆ ನಮಗೆ ಮಾಹಿತಿ ದೊರೆತಿದೆ.ಒಟ್ಟಾರೆ ನಮಗೆ ಮೂರು ಶವಗಳು ದೊರೆತಿದ್ದು, ಇವರೆಲ್ಲರೂ ಪಂಬ್ಲಿಂಗ್‌ ಮತ್ತಿತರ ಕೆಲಸದಲ್ಲಿದ್ದರೆಂದು ತಿಳಿದುಬಂದಿದೆ. ಹೋಳಿ ಹಬ್ಬದ ಪ್ರಯುಕ್ತ ಮೂರು ದಿನ ರಜೆ ನೀಡಲಾಗಿತ್ತು.

ಈ ವೇಳೆ ಮೂವರೂ ತಮ್ಮ 3-4 ಮಂದಿ ಸ್ನೇಹಿತರೊಂದಿಗೆ ಮದ್ಯದ ಪಾರ್ಟಿ ಆಯೋಜಿಸಿದ್ದರು. ಬಂದಿದ್ದವರ ಪೈಕಿ ಒಬ್ಬಾತ ಗೆಳೆಯನ ಅಕ್ಕನ ಜೊತೆಗೆ ಫೋನಿನಲ್ಲಿ ಮಾತನಾಡಿದ್ದೇ ಜಗಳಕ್ಕೆ ಕಾರಣವಾಗಿದ್ದು , ಮೂವರು ಸ್ಥಳದಲ್ಲಿದ್ದ ರಾಡ್‌ ಮತ್ತು ಬಾಟಲ್‌ ಗಳಿಂದ ಹಲ್ಲೆ ನಡೆಸಿದ್ದಾರೆ.

ನಾವು ಬಂದಾಗ ಇಬ್ಬರು ಮೃತಪಟ್ಟಿದ್ದರು. ಒಬ್ಬನನ್ನು ಆಂಬುಲೆನ್ಸ್‌ ನಲ್ಲಿ ಹಾಕುವಾಗ ಮೃತಪಟ್ಟಿದ್ಧಾನೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಲಾಗಿದ್ದು, ಶೀಘ್ರದಲ್ಲಿಯೇ ಎಲ್ಲರನ್ನೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ