Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವರಾತ್ರಿ ದಿನದಂದೇ ದುಷ್ಕರ್ಮಿಗಳ ಅಟ್ಟಹಾಸ : ಶಿವಲಿಂಗ, ನಂದಿ ವಿಗ್ರಹಗಳ ಭಗ್ನ

Advertisement
ಗದಗ: ನಾಡಿನಾದ್ಯಂತ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಕ್ತರು ಶಿವ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ.

ಶಿವರಾತ್ರಿ ದಿನದಂದೇ ಗದಗ ಜಿಲ್ಲೆಯ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು,ಶಿವಲಿಂಗ, ನಂದಿ ವಿಗ್ರಹಗಳನ್ನು ಭಗ್ನಗೊಳಿಸಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ರಾತ್ರಿ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಶ್ರೀರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದಾರೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಭಕ್ತರು ಶಿವಲಿಂಗ, ನಂದಿ ವಿಗ್ರಹಕ್ಕೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಿದ್ದ ವೇಳೆ ದೇವರ ವಿಗ್ರಹ, ಶಿವಲಿಂಗ ಭಗ್ನಗೊಂಡಿರುವುದು ಕಂಡು ಬೆಚ್ಚಿ ಬಿದ್ದಿದ್ದಾರೆ.

ಶಿವರಾತ್ರಿ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಗ್ರಾಮಸ್ಥರು ದೇವಸ್ಥಾನದಲ್ಲಿ ಸುಣ್ಣ, ಬಣ್ಣ ಹಚ್ಚಿ ದೇವಾಲಯವನ್ನು ಅಲಂಕರಿಸಿ ಹೋಗಿದ್ದು. ಇಂದು ಬೆಳಿಗ್ಗೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು, ಎದುರಿನ ನಂದಿ ವಿಗ್ರಹದ ಮುಖ ಹಾಗೂ ದೇವಸ್ಥಾನದ ಹಿಂಭಾಗದಲ್ಲಿರುವ ಹೊನ್ನೆತ್ತಮ್ಮ ದೇವಿ ವಿಗ್ರಹವನ್ನೂ ವಿರೂಪಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮೊದಲು ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ