Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತು ಸೀಳಿ ಚಿನ್ನಾಭರಣ ದರೋಡೆ

Advertisement
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನೀರು ಕೇಳುವ ನೆಪದಲ್ಲಿ ಮನೆಗೆ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ.

ಶೋಭಾ (60) ಮೃತ ಮಹಿಳೆಯಾಗಿದ್ದು, ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ ತಮ್ಮ ಪತಿಯೊಂದಿಗೆ ವಾಸವಾಗಿದ್ದರು.

ಈ ದಂಪತಿಗೆ ಮಕ್ಕಳಿರಲಿಲ್ಲ. ಪತಿಯೂ 12 ವರ್ಷಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದ್ದ ಕಾರಣ ಇವರೇ ಮನೆಗೆ ಆಧಾರವಾಗಿದ್ದರು.

ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು.

ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ. ದರೋಡೆ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ