Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕರ್ನಾಟಕ ನೆರೆಪೀಡಿತ ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರ ತೆರೆಯಿರಿ: ಕುಮಾರಸ್ವಾಮಿ 

Advertisement
ನವದೆಹಲಿ: ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ.

ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ರಾಜ್ಯ ಸರಕಾರದ ಆದ್ಯ ಕರ್ತವ್ಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು.

NDRF ಮತ್ತು SDRF ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು.

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್‌ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು.

ಇದರಿಂದ ಅವರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ.

ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ.

ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು.

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್