Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

6,617 ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ 

Advertisement

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗದಂತೆ ತಡೆಯಲು ಶಾಲಾ ಶಿಕ್ಷಣ ಇಲಾಖೆಯು ಎರಡನೇ ಹಂತದಲ್ಲಿ 6,617 ಹೆಚ್ಚುವರಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಜಿಲ್ಲಾವಾರು ಹುದ್ದೆಗಳ ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ನಿಯಮಿತ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಮಾರ್ಚ್-2027) ಒಟ್ಟು 40,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಈ ಹಿಂದೆ ಅನುಮೋದನೆ ನೀಡಿತ್ತು.

ಎರಡನೇ ಹಂತದ ನೇಮಕಾತಿಯ ವಿವರ:

ಮೊದಲ ಹಂತದಲ್ಲಿ ಪಿ.ಎಸ್.ಟಿ ಮತ್ತು ಜಿ.ಪಿ.ಟಿ ವೃಂದದ 33,708 ಖಾಲಿ ಹುದ್ದೆಗಳ ಪೈಕಿ 30,337 ಅತಿಥಿ ಶಿಕ್ಷಕರ ನೇಮಕಕ್ಕೆ ಮಂಜೂರಾತಿ ನೀಡಲಾಗಿತ್ತು. 

ಇದೀಗ ರಾಜ್ಯದ ವಿವಿಧ ಜಿಲ್ಲೆಗಳ ಉಪನಿರ್ದೇಶಕರ (ಆಡಳಿತ) ಮನವಿ ಮತ್ತು ವಿದ್ಯಾರ್ಥಿ-ಶಿಕ್ಷಕರ ಅನುಪಾತವನ್ನು (PTR) ಪರಿಗಣಿಸಿ, ಉಳಿಕೆ ಮಂಜೂರಾದ ಹುದ್ದೆಗಳಲ್ಲಿ ಲಭ್ಯವಿರುವ 6,617 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆಯುಕ್ತರ ಕಚೇರಿ ಅನುಮತಿ ನೀಡಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST