LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

2028ಕ್ಕೆ ನಮ್ಮದೇ ಸರ್ಕಾರ : ಡಿ.ಕೆ.ಶಿವಕುಮಾರ್ 

Advertisement

ಬೆಂಗಳೂರು: ಭಾರತ ಜೋಡೋ ಯಾತ್ರೆ ಕೇವಲ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ದೇಶದ ಐಕ್ಯತೆ, ಸಮಗ್ರತೆಗಾಗಿ ಹಾಗೂ ನಮ್ಮ ರಾಜ್ಯದಲ್ಲಿ ಈ ಯಾತ್ರೆ ಚಾಮರಾಜನಗರ ಹಾಗೂ ರಾಯಚೂರಿನವರೆಗೆ ನಡೆದ ಯಾತ್ರೆ ದೇಶದಲ್ಲಿ ಬದಲಾವಣೆ ಗಾಳಿ ನೀಡಿದ ಸಂದೇಶ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಪಾದಯಾತ್ರೆಯ ಐದನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಭಾರತ್ ಜೋಡೋ ಯಾತ್ರೆ ದೇಶದ ಯುವಕರು, ಮಹಿಳೆಯರು, ರೈತರು, ಬಡವರ ಸಮಸ್ಯೆಗೆ ಪರಿಹಾರ ನೀಡಿತು. ಜನಸಾಮಾನ್ಯರ ಸಂಕಷ್ಟಕ್ಕೆ ಒದಗಿ ಬಂದ ಪರಿಹಾರ. ರಾಹುಲ್ ಗಾಂಧಿ ಅವರು ಕೇವಲ ಯಾತ್ರೆ ಮಾಡಲಿಲ್ಲ, ಎಲ್ಲಾ ವರ್ಗದ ಜನರ ಸಮಸ್ಯೆ ಆಲಿಸಿದರು ಎಂದರು.

ನಮ್ಮ ರಾಜ್ಯದಲ್ಲಿ 21 ದಿನ 511 ಕಿ ಮೀ ಪಾದಯಾತ್ರೆ ನಡೆಯಿತು. ರಾಷ್ಟ್ರ ಮಟ್ಟದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4 ಸಾವಿರ ಕಿ.ಮೀ ಹೆಜ್ಜೆ ಹಾಕಲಾಯಿತು. ನಮ್ಮ ಯಾತ್ರೆ ವೇಳೆ ಚಿತ್ರದುರ್ಗದಲ್ಲಿ ಸಾಗುವಾಗ ಜೋರಾಗಿ ಮಳೆ ಬಂದಿತ್ತು.

ನಮ್ಮ ಸ್ನೇಹಿತ ಸುಧಾಕರ್ ಅಂದು ಅವರು ಹಾಗೂ ಕಾರ್ಯಕರ್ತರು ಯಾತ್ರೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಟ್ಟ ಶ್ರಮ. ಆದರೆ ಸುಧಾಕರ್ ಅವರು ನಮ್ಮೊಂದಿಗೆ ಇಲ್ಲ. ಅವರ ಕೆಲಸ ಸಾಕ್ಷಿಯಾಗಿ ಉಳಿದಿದೆ. ಚಾಮರಾಜನಗರದಿಂದ ರಾಯಚೂರಿನವರೆಗೆ ಪಾದಯಾತ್ರೆ ನಡೆದ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಿದೆ ಎಂದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ದಸರಾ ಸಮಯದಲ್ಲಿ ಮೂರು ದಿನ ರಾಜ್ಯದಲ್ಲಿ ಉಳಿದು ಯಾತ್ರೆ ವೇಳೆ ಭಾಗವಹಿಸಿ ಹೆಜ್ಜೆ ಹಾಕಿದರು. ಈ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರು ಹೆಜ್ಜೆ ಹಾಕಿದ್ದು ಕರ್ನಾಟಕದಲ್ಲಿ ಮಾತ್ರ. ಈ ಯಾತ್ರೆ ಸಂದರ್ಭದಲ್ಲೇ ನಡೆದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆಯ್ಕೆ ಮಾಡಲಾಯಿತು. ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ಮತ ಚಲಾಯಿಸಿದರು. ನಿಜಲಿಂಗಪ್ಪ ಅವರ ನಂತರ ಕರ್ನಾಟಕದವರು ಈ ಸ್ಥಾನಕ್ಕೆ ಏರಿದರು ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆ ದೇಶದಲ್ಲಿ ಯಾವ ರೀತಿ ಪಾದಯಾತ್ರೆ ಮಾಡಬೇಕು ಎಂಬುದಕ್ಕೆ ಅಡಿಪಾಯ ಹಾಕಿಕೊಟ್ಟಿತು. ನಾನು ಅಧ್ಯಕ್ಷನಾಗಿದ್ದಾಗ ಈ ಯಾತ್ರೆ ನಡೆಯಿತು, 136 ಸೀಟು ಗೆದ್ದು ನೀವೆಲ್ಲ ಸರ್ಕಾರದ ಪಾಲುದಾರರಾಗಿದ್ದೀರಿ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ. ಅದೇ ಕಾರಣಕ್ಕೆ ಈ ಸಭಾಂಗಣಕ್ಕೆ ಭಾರತ ಜೋಡೋ ಎಂದು ಹೆಸರಿಡಲಾಗಿದೆ ಎಂದರು.

ನಾನು ರಾಹುಲ್ ಗಾಂಧಿ ಅವರಿಗೆ ಒಂದು ವಿಚಾರ ತಿಳಿಸಿ, ದಾಖಲೆ ಸಲ್ಲಿಸಿದ್ದೆ. ಅವರು ಮರೆತಿದ್ದಾರೆ ಎಂದು ಭಾವಿಸಿದ್ದೆ. ಆದರೆ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಈ ಬಗ್ಗೆ ವೇಣುಗೋಪಾಲ್ ಅವರ ಜತೆ ಚರ್ಚೆ ಮಾಡಿದ್ದಾರೆ. ಯಾತ್ರೆ ವೇಳೆ ನಾವು ಚಿತ್ರದುರ್ಗದ ಬಳಿ ಟೀ ಕುಡಿಯುತ್ತಿರುವಾಗ ಅಜ್ಜಿಯೊಬ್ಬರು ಬಂದು ರಾಹುಲ್ ಗಾಂಧಿ ಅವರಿಗೆ ಸೌತೆಕಾಯಿ ಕೊಟ್ಟರು. ಇದು ನಿಮ್ಮ ಅಜ್ಜಿ ಇಂದಿರಾ ಗಾಂಧಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು ಎಂದು ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್