Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ

Advertisement
ಬೆಂಗಳೂರು: ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಅದರಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯೇ ಹೆಚ್ಚಿದೆ.

ರಾಜ್ಯದಲ್ಲಿ ಮಕ್ಕಳು ನಾಪತ್ತೆ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚಿ ಮಕ್ಕಳು ಕಾಣೆಯಾಗಿದ್ದು, ಆ ಪೈಕಿ 1336 ಮಕ್ಕಳು ಇನ್ನೂ ನಿಗೂಢರಾಗಿದ್ದಾರೆ. ಕಿಡ್ನ್ಯಾಪ್ ಹಾಗೂ ನಿಗೂಢ ನಾಪತ್ತೆ ಕೇಸ್ ನಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯೇ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ಅದರಲ್ಲಿಯೂ ಮಕ್ಕಳು ನಾಪತ್ತೆಯಾಗಿರುವ ಪ್ರಕರಣದಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಮಕ್ಕಳ ಅಪಹರಣ ಪ್ರಕರಣ ವರ್ಷದಿಂದ ವರ್ಷ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ.

ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದರು. 2020 ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿದೆ. ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ದಾರೆ.

ಉಳಿದ 1336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,002 ಮಂದಿ ನಾಪತ್ತೆಯಾಗಿದ್ದಾರೆ. 4086 ಗಂಡು ಮಕ್ಕಳ ಪೈಕಿ 333 ಮಕ್ಕಳು ನಿಗೂಢರಾಗಿದ್ದಾರೆ.

ಅಪಹರಣ ಪ್ರಕರಣದಲ್ಲಿ 5 ವರ್ಷಗಳಲ್ಲಿ 634 ಅಪಹರಣಕಾರರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮಕ್ಕಳು ನಾಪತ್ತೆ ಪ್ರಕರಣದಲ್ಲಿ ಬೆಂಗಳುರು ಮೊದಲ ಸ್ಥಾನ, ದಾವಣಗೆರೆ ಎರಡನೇ ಸ್ಥಾನ, ಉಡುಪಿ ಮೂರನೇ ಸ್ಥಾನ ಬಳಿಕ ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ನಂತರದ ಸ್ಥಾನಗಳಲ್ಲಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ