Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ

Advertisement
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಮಾರ್ಚ್ 29 ರಂದು ಹೊರಡಿಸಿದ್ದ ಆದೇಶ ಪತ್ರದಂತೆ ಸಂಪುಟದ ನೇಮಕಾತಿ ಸಮಿತಿಯು, ನಿಧಿ ತಿವಾರಿ ಅವರ ನೇಮಕಾತಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ.

ಪ್ರಧಾನ ಮಂತ್ರಿ ಕಚೇರಿಯ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿಧಿ ತಿವಾರಿ ಈಗ ಹೊಸ ಹುದ್ದೆಗೆ ನೇಮಕಗೊಂಡಿದ್ಧಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ.

ನಿಧಿ ತಿವಾರಿ ಉತ್ತರ ಪ್ರದೇಶದ ವಾರಣಾಸಿಯ ಮೆಹಮುರ್ಗಂಜ್ ಮೂಲದವರು.ಉತ್ತರ ಪ್ರದೇಶದ ವಾರಣಾಸಿ 2014ರಿಂದ ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ನಿಧಿ ತಿವಾರಿ ಅವರು 2014 ರ ಬ್ಯಾಚ್‌ನ ನಾಗರಿಕ ಸೇವಾ ಅಧಿಕಾರಿಯಾಗಿ ಸೇರಿದರು. ನಿಧಿ ತಿವಾರಿ ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದಾರೆ.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೊದಲು, ಅವರು ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ (ವಾಣಿಜ್ಯ ತೆರಿಗೆ) ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವಾಗಲೇ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎಂದು ವರದಿ ತಿಳಿಸಿದೆ. ನಿಧಿ ತಿವಾರಿ ಅವರು 2022 ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಅಧೀನ ಕಾರ್ಯದರ್ಶಿಯಾಗಿ ಸೇರಿದರು. ಜನವರಿ 6, 2023 ರಿಂದ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ