ನಿನ್ನೆ ನಡೆದ ಐಎಂಎಫ್ ಎಕ್ಸಿಕ್ಯೂಟಿವ್ ಬೋರ್ಡನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಭಾರತದ ಮನವಿಯನ್ನು ಧಿಕ್ಕರಿಸಿ ಐಎಂಎಫ್ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ರೂಪಾಯಿ ಸಾಲ ಮಂಜೂರು ಮಾಡಿದೆ.
ಪಾಕಿಸ್ತಾನ ಆರ್ಥಿಕ ವ್ಯವಹಾರಗಳ ವಿಭಾಗದ ಅಧಿಕೃತ ಎಕ್ಸ್ ಖಾತೆಯಿಂದ ಟ್ವೀಟ್ ಮಾಡಿ ಸಾಲ ಕೇಳಲಾಗಿತ್ತು. ಐಎಂಎಫ್ ಸಾಲಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪಾಕಿಸ್ತಾನದ ನಿರಂತರ ವೈಫಲ್ಯದ ಬಗ್ಗೆ ಭಾರತ ಎಚ್ಚರಿಕೆ ನೀಡಿತ್ತು. ಸಾಲ ಮಂಜೂರಾತಿ ಆಗೋದಿಲ್ಲ ಎನ್ನಲಾಗಿತ್ತು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಸಾಲ ಮಂಜೂರಾಗಿದೆ.

