Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನ ಅಧಿಕಾರಿಯ ಉಚ್ಛಾಟನೆ

Advertisement
--------------------------------------24 ಗಂಟೆಯಲ್ಲಿ ಭಾರತ ತೊರೆಯಲು ಅವಕಾಶ

ನವದೆಹಲಿ: ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಲೇ ಬೇಹುಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತವು ಮಂಗಳವಾರ ಹುದ್ದೆಯಿಂದ ಉಚ್ಚಾಟನೆ ಮಾಡಿದೆ. ವಿದೇಶಾಂಗ ಸಚಿವಾಲಯದ (MEA) ಅಧಿಕಾರಿಯೊಬ್ಬನ ಮೇಲೆ ಈ ಕ್ರಮ ಜಾರಿಯಾಗಿದ್ದು, ದೇಶ ತೊರೆಯಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ.


ಇದರ ಬೆನ್ನಲ್ಲೇ, ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್‌ನಲ್ಲಿನ ಸಿಬ್ಬಂದಿಯನ್ನು ಸಹ ಬೇಹುಗಾರಿಕೆ ಆರೋಪದ ಒಪ್ಪಿಕೊಳ್ಳಲಾಗದ ವ್ಯಕ್ತಿ ಎಂದು ಘೋಷಿಸಿ, ಆ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ. ಅಧಿಕಾರಿ ಮತ್ತು ಕುಟುಂಬ ಸದಸ್ಯರಿಗೆ 24 ಗಂಟೆಗಳಲ್ಲಿ ಪಾಕಿಸ್ತಾನವನ್ನು ತೊರೆಯುವಂತೆ ತಿಳಿಸಲಾಗಿದೆ ಎಂದು ಅದು ಹೇಳಿದೆ.


ಪಹಲ್ಗಾಮ್​ ದಾಳಿ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಮಿಲಿಟರಿ ಮುಖಾಮುಖಿಯ ಬಳಿಕ ಉಭಯ ದೇಶಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ನಡುವೆ ಪರಸ್ಪರ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನಿ ಪ್ರಜೆಯ ವಿರುದ್ಧದ ನಿರ್ದಿಷ್ಟ ಆರೋಪಗಳನ್ನು ವಿದೇಶಾಂಗ ಸಚಿವಾಲಯ ಬಹಿರಂಗಪಡಿಸದಿದ್ದರೂ, ಇದು ಪಂಜಾಬ್ ಪೊಲೀಸರು ತನಿಖೆ ನಡೆಸುತ್ತಿರುವ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ.


ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಅಧಿಕಾರಿಗೆ 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಸೂಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ