Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ 'ಅಬೀರ್ ಗುಲಾಲ್' ಚಿತ್ರಕ್ಕೆ ಭಾರತದಲ್ಲಿ ನಿಷೇಧ

Advertisement
ಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಬಹಿಷ್ಕಾರದ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ 'ಅಬೀರ್ ಗುಲಾಲ್' ಚಿತ್ರಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ. ಈ​ ಚಿತ್ರದ ಮೂಲಕ ಪಾಕ್​ ನಟ ಬಾಲಿವುಡ್​ಗೆ ಮರಳಿದ್ದರು.

ವಾಣಿ ಕಪೂರ್ ಜೊತೆ ತೆರೆ ಹಂಚಿಕೊಂಡಿರುವ ಈ ಹಿಂದಿ​​ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.

ಎಲ್ಲಾ ಪಾಕಿಸ್ತಾನಿ ಕಲಾವಿದರು, ಗಾಯಕರು ಮತ್ತು ತಂತ್ರಜ್ಞರ ಕೆಲಸಗಳಿಗೆ ಸಹಕಾರ ನೀಡಬಾರದೆಂದು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಒತ್ತಾಯಿಸಿದ ನಂತರ ಈ ನಿರ್ಧಾರ ಹೊರಬಿದ್ದಿದೆ. ಬುಧವಾರ ಬಿಡುಗಡೆಯಾದ ಹೇಳಿಕೆಯಲ್ಲಿ, FWICE ಎಲ್ಲಾ ಪಾಕಿಸ್ತಾನಿ ಕಲಾವಿದರ ಬಹಿಷ್ಕಾರದ ಬಗ್ಗೆ ಒತ್ತಿ ಹೇಳಿದೆ.

"ಈಗಿನ ನಿರ್ದೇಶನದ ಹೊರತಾಗಿಯೂ, ಪಾಕಿಸ್ತಾನಿ ನಟ ಫವಾದ್ ಖಾನ್ ಅವರ ಹಿಂದಿ ಚಿತ್ರ ಅಬೀರ್ ಗುಲಾಲ್ ಜೊತೆಗಿನ ಕೊಲಾಬರೇಶನ್​​ ಬಗ್ಗೆ ನಮಗೆ ತಿಳಿಸಲಾಗಿದೆ. ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ದಾಳಿಯ ಹಿನ್ನೆಲೆಯಲ್ಲಿ, ಯಾವುದೇ ಭಾರತೀಯ ಚಲನಚಿತ್ರ ಅಥವಾ ಎಂಟರ್​​​​ಟೈನ್ಮೆಂಟ್​​ ಪ್ರಾಜೆಕ್ಟ್‌ಗಳಲ್ಲಿ ಭಾಗವಹಿಸುವ ಎಲ್ಲಾ ಪಾಕಿಸ್ತಾನಿ ಕಲಾವಿದರು, ಗಾಯಕರು ಮತ್ತು ತಂತ್ರಜ್ಞರ ಮೇಲೆ FWICE ಮತ್ತೊಮ್ಮೆ ಸಂಪೂರ್ಣ ಬಹಿಷ್ಕಾರ ಹೊರಡಿಸಲು ಒತ್ತಾಯಿಸಲ್ಪಟ್ಟಿದೆ. ಇದರಲ್ಲಿ, ಜಗತ್ತಿನ ಯಾವುದೇ ಪ್ರದೇಶದಲ್ಲಿ ನಡೆಯುವ ಪ್ರದರ್ಶನಗಳು ಅಥವಾ ಕೊಲಾಬರೇಶನ್​ಗಳೂ ಸೇರಿವೆ" ಎಂದು FWICE ಹೇಳಿದೆ.

ಭಯೋತ್ಪಾದಕ ದಾಳಿಯ ಸಂತ್ರಸ್ತ ಕುಟುಂಬಗಳಿಗೆ ನಟ ಫವಾದ್ ಖಾನ್​​ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದರು. "ಪಹಲ್ಗಾಮ್‌ನಲ್ಲಿ ನಡೆದ ಘೋರ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಈ ಭಯಾನಕ ಘಟನೆಯಲ್ಲಿ ಕೊನೆಯುಸಿರೆಳೆದವರೊಂದಿಗೆ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳಿವೆ. ಈ ಕಠಿಣ ವೇಳೆ ಅವರ ಕುಟುಂಬಗಳಿಗೆ ಶಕ್ತಿ ಸಿಗಲೆಂದು ನಾವು ಪ್ರಾರ್ಥಿಸುತ್ತೇವೆ" ಎಂದು ಬರೆದುಕೊಂಡಿದ್ದರು.

ಆರತಿ ಎಸ್.ಬಾಗ್ದಿ ನಿರ್ದೇಶನದ 'ಅಬೀರ್ ಗುಲಾಲ್' ಚಿತ್ರ ಮೇ 9ರಂದು ಬಿಡುಗಡೆಗೊಳ್ಳಲು ರೆಡಿಯಾಗಿದೆ. 9 ವರ್ಷಗಳ ನಂತರ ಫವಾದ್ ಬಾಲಿವುಡ್‌ಗೆ ಮರಳಲು ಸಜ್ಜಾಗಿದ್ದಾರೆ. ನಟ ಕೊನೆಯ ಬಾರಿಗೆ ಬಾಲಿವುಡ್ ಚಿತ್ರ 'ಏ ದಿಲ್ ಹೈ ಮುಷ್ಕಿಲ್' (2016)ನಲ್ಲಿ ಕಾಣಿಸಿಕೊಂಡಿದ್ದರು. ಪಾಕಿಸ್ತಾನಿ ಪ್ರಜೆಯಾಗಿದ್ದ ಅವರನ್ನು 2016ರ ಉರಿ ದಾಳಿಯ ನಂತರ ಭಾರತ ಸಿನಿಮಾಗಳಿಂದ ನಿಷೇಧಿಸಲಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ