Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ : ಭಾರೀ ವೈರಲ್

Advertisement
ಬೆಂಗಳೂರು ಹೊರವಲಯ ರಾಮನಗರದ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕಾರ್ಖಾನೆಯೊಂದರ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹವೊಂದು ಪತ್ತೆಯಾಗಿದ್ದು, ಭಾರೀ ವೈರಲ್ ಆಗಿದೆ.

ಬಿಡದಿಯ ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯ ಶೌಚಾಲಯದ ಗೋಡೆಯಲ್ಲಿ ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದು, ಜೊತೆಗೆ ಕನ್ನಡಿಗರ ಬಗ್ಗೆ ಕೂಡ ಅವ್ಯಾಚ್ಯ ಪದಗಳಿಂದ ಬರೆಯಲಾಗಿದೆ.ಸದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರೇ ಈ ಕೆಲಸ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ.

ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಕಾರ್ಖಾನೆಯ ಆಡಳಿತ ಮಂಡಳಿ ಕೂಡ ಈ ಬಗ್ಗೆ ನೋಟಿಸ್ ಬೋರ್ಡ್ ನಲ್ಲಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ.

ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಹೇಳಿ ಸುಮ್ಮನಾಗಿದೆ.

ಸದ್ಯ ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬಿಡದಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಈ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ವ್ಯಕ್ತಿಯ ಈ ಬರಹದಿಂದ ಕನ್ನಡಕ್ಕೂ ಅವಮಾನವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ