Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಸಂಘದ ಚುನಾವಣೆ: ಒಂದು ಮತದಿಂದ ಜಯಗಳಿಸಿದ ಪಾಪಣ್ಣ

Advertisement
ತುರುವೇಕೆರೆ: -ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ನಿರ್ದೇಶಕ ಸ್ಥಾನಕ್ಕೆ ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪನ್ಯಾಸಕ ಪಾಪಣ್ಣ ಕೇವಲ ಒಂದು ಮತದಿಂದ ಜಯಗಳಿಸಿ ಗೆಲುವಿನ ನಗೆ ಬೀರಿದ್ದಾರೆ.

ಪಟ್ಟಣದ ಸರ್ಕಾರಿ ಮಾದರಿ ಬಾಲಕರ ಪಾಠಶಾಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕಕ್ಕೆ ನೂತನ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪನ್ಯಾಸಕ ಪಾಪಣ್ಣ ಕೇವಲ ಒಂದು ಮತದ ಅಂತರದಲ್ಲಿ ಜಯಗಳಿಸಿ ಇದೇ ಮೊದಲ ಬಾರಿಗೆ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿ ಕಂಡುಬಂದ ಈ ಕ್ಷೇತ್ರದಲ್ಲಿ ಪಾಪಣ್ಣ ತಮ್ಮ ಪ್ರತಿಸ್ಪರ್ಧಿ ನಿಜಗುಣಸ್ವಾಮಿ ಅವರಿಗಿಂತ ಒಂದು ಮತ ಅಧಿಕ ಪಡೆದು ಜಯಗಳಿಸಿದರು.

ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಲ್ಲಿ 46 ಮಂದಿ ಮತದಾರರಿದ್ದರು. ಈ ಪೈಕಿ 41 ಮತಗಳು ಚಲಾವಣೆಯಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಪಾಪಣ್ಣ 19 ಮತಗಳನ್ನು ಪಡೆದು ವಿಜೇತರಾದರೆ, ಪ್ರತಿಸ್ಪರ್ಧಿ ಉಪನ್ಯಾಸಕ ನಿಜಗುಣಸ್ವಾಮಿ 18 ಹಾಗೂ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ನಂಜೇಗೌಡ ಕೇವಲ 04 ಮತ ಪಡೆದು ಪರಾಜಿತಗೊಂಡರು.

ಚುನಾವಣೆಯಲ್ಲಿ ಜಯಗಳಿಸಿದ ಪಾಪಣ್ಣ ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಾಘವೇಂದ್ರ, ಶಿಕ್ಷಕರಾದ ರಾಜು, ನಾಗರಾಜ್, ವಿವಿಧ ಸರ್ಕಾರಿ ಪ್ರೌಢಶಾಲೆಗಳ ಬೋದಕೇತರರಾದ ಕೆಂಪೇಗೌಡ, ಪೂರ್ಣಚಂದ್ರ, ಶಿವರಾಜ್ ಕುಮಾರ್, ಜಯಣ್ಣ ಸೇರಿದಂತೆ ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ