Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಮೇಶ್ವರ್ ಒಬ್ಬ ದಲಿತ ನಾಯಕ ಹೀಗಾಗಿ ಅವರ ಮೇಲೆ ಸೇಡಿನ ರಾಜಕಾರಣ : ಸಿದ್ದರಾಮಯ್ಯ 

Advertisement
ಬೆಂಗಳೂರು : ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿ ನಡೆಸಿದ್ದಾರೆ.

ಇನ್ನು ಈ ವಿಚಾರವಾಗಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪರಮೇಶ್ವರ್ ಒಬ್ಬ ದಲಿತ ನಾಯಕ ಹೀಗಾಗಿ ಅವರ ಮೇಲೆ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ ನಡೆಸಿದೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆರಂಭಗೊಂಡು ಬಹಳ ವರ್ಷಗಳಾಗಿದೆ.

ಪರಮೇಶ್ವರ್ ಒಬ್ಬ ದಲಿತ ನಾಯಕರು. ಹೀಗಾಗಿ ಸೇಡಿನ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ಸಿನ ದಲಿತರು, ಬಡವರ ಹಿಂದುಳಿದವರ ಮೇಲೆ ದಾಳಿ ನಡೆಸಲಾಗಿದೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಈ ಹಿಂದೆ ಐಟಿ ದಾಳಿ ನಡೆಸಿತ್ತು.

ಈಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಲಿತ ನಾಯಕನನ್ನು ಟಾರ್ಗೆಟ್ ಮಾಡಲಾಗಿದೆ. ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯ ಯಾವ ನಾಯಕರ ಮೇಲೂ ಇಡಿ ದಾಳಿ ನಡೆಸಿಲ್ಲ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಹಳ ಆದರ್ಶನಾ? ಬಿ ವೈ ವಿಜಯೇಂದ್ರ, ಹೆಚ್‍ಡಿ ಕುಮಾರಸ್ವಾಮಿ ಬಹಳ ಪ್ರಾಮಾಣಿಕರ? ಇದೆಲ್ಲ ನೋಡಿದರೆ ಟಾರ್ಗೆಟ್ ಮಾಡುತ್ತಿದ್ದಾರೆ ಅನಿಸುತ್ತದೆ. ರಾಜಕೀಯ ಪ್ರೇರಿತವಾಗಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ದಾಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ