Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ಮಹೋತ್ಸವದಲ್ಲಿ ಭಾಗವಹಿಸಿ : ಅನಂತ ಬಿರಾದಾರ

Advertisement
ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ನೆಹರು ಕ್ರೀಡಾಂಗಣದಲ್ಲಿ ಜೂನ್ 1 ರಂದು ಬೆಳಿಗ್ಗೆ 6 ರಿಂದ 8 ವರೆಗೆ ನಡೆಯಲಿದೆ ಬ್ರಹತ್ ಯೋಗ ಮಹೋತ್ಸವ ಕಾರ್ಯಕ್ರಮ

ಬೀದರ : ಭಾರತ ಸರ್ಕಾರವು ಈ ಸಲ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಉದ್ದೇಶದೊಂದಿಗೆ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ ಎಂದು ಐ.ಎನ್.ಓ ರಾಷ್ಟ್ರೀಯ ಅದ್ಯಕ್ಷ ಹಾಗೂ ಆಯುಶ್ ಇಲಾಖೆಯ ಯೋಗ ಸರ್ಟಿಫಿಕೇಶನ್ ಬೋರ್ಡ್ ಸದಸ್ಯ ಅನಂತ ಬಿರಾದಾರ ಅವರು ತಿಳಿಸಿದರು.

ಭಾರತ ಸರ್ಕಾರದ ಆಯುಶ್ ಇಲಾಖೆಯ ಸಹಕಾರದೊಂದಿಗೆ ಸೂರ್ಯ ಫೌಂಡೇಶನ್, ಐ ಎನ್ ಓ ವತಿಯಿಂದ ದೇಶಾದ್ಯಂತ ನೂರು ಕಡೆ ಯೋಗ ಮಹೋತ್ಸವ ಕಾರ್ಯಕ್ರಮ
ಆಚರಿಸಲಾಗುತ್ತಿದೆ ಅದೆ ರೀತಿ ಬೀದರ ನಗರದ ನೇಹರು ಕ್ರೀಡಾಂಗಣದಲ್ಲಿ ಸ್ಥಳಿಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಜರುಗಲಿದೆ.



ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ಚಿದಂಬರಾಶ್ರಮದ ಡಾ.ಶಿವಕುಮಾರ ಸ್ವಾಮಿ ಹಾಗೂ ಹಿರೇಮಠ ಸಂಸ್ಥಾನ ಭಾಲ್ಕಿಯ ಗುರುಬಸವ ಪಟ್ಟದ್ದೇವರು ವಹಿಸಲಿದ್ದು, ಪತಂಜಲಿ ಸಂಸ್ಥೆಯ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಅವರು ಯೋಗವನ್ನು ಹೇಳಿಕೊಡಲಿದ್ದು ಬೆಂಗಳೂರಿನ ಆರ್ಟ ಆಫ್ ಲಿವಿಂಗ್ ಸಂಸ್ಥೆಯ ಋಷಿ ದೇವವೃತ ಉಪಸ್ಥಿತರಿರಲಿದ್ದಾರೆ.

ಯೋಗವು ದೈಹಿಕ, ಮಾನಸಿಕ, ಭಾವನಾತ್ಮಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ಒಳಗೊಳ್ಳುವ ಸಮಗ್ರ ಸಾಧನವಾಗಿದ್ದು ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಮಹೋತ್ಸವ ಕಾರ್ಯ್ರಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅನಂತ ಬಿರಾದಾರ ಅವರು ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂನ್ 21 ರಂದು ಆಂದ್ರ ಪ್ರದೇಶ ರಾಜ್ಯದ ವಿಶಾಖಪಟ್ಟಣಂ ನಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಆ ದಿನ ಸೂರ್ಯ ಫೌಂಡೇಶನ್ ಹಾಗೂ ಐ.ಎನ್.ಓ ವತಿಯಿಂದ ದೇಶಾದ್ಯಂತ ಐದು ಸಾವಿರ ಸ್ಥಳಗಳಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದರು.



ಈ ಸಂದರ್ಭದಲ್ಲಿ ಐ.ಎನ್.ಓ ರಾಜ್ಯ ಸಂಚಾಲಕ ಗುರುನಾಥ ರಾಜಗೀರಾ, ರಾಜ್ಯ ಕಾರ್ಯದರ್ಶಿ ಯೋಗೇಂದ್ರ ಯದಲಾಪುರೆ, ಜಿಲ್ಲಾದ್ಯಕ್ಷ ಗೋರಖನಾಥ ಕುಂಬಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ, ಜಿಲ್ಲಾ ಸಂಚಾಲಕ ಡಾ.ಮಂಜುಳಾ ಮುಚಳಂಬೆ, ತಾಲ್ಲೂಕು ಸಂಚಾಲಕ ವಿನೋದ ಪಾಟೀಲ ಸೇರಿದಂತೆ ಇತರರಿದ್ದರು.

ವರದಿ:ಸಂತೋಷ ಬಿಜಿ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ