Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲ ಪಡೆದು ಮನೆ ಖರೀದಿಸುವವರಿಗೆ ಸರ್ಕಾರದಿಂದಲೇ ಬಡ್ಡಿ ಪಾವತಿ

Advertisement
ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ್, ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದು, ಈ ಯೋಜನೆ ಯಡಿ ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ನಿರ್ಮಿಸುತ್ತಿರುವ 45,124 ಒಂದು ಬಿಎಚ್‌ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು, ಫಲಾನುಭವಿಗಳ ಹಣಕಾಸಿನ ಸಾಮರ್ಥ್ಯದ ಕೊರತೆಯಿರುವುದು ತಿಳಿದುಬಂದಿದೆ.

ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಫಲಾನುಭವಿಗಳು ಪಾವತಿಸುವ ಮಾಸಿಕ ಸಾಲದ ಕಂತಿನ ಹೊರೆಯನ್ನು ಕಡಿಮೆ ಮಾಡಲು ಸಾಲದ ಬಡ್ಡಿಯಲ್ಲಿ ಶೇ.3 ರಿಂದ 5 ರಷ್ಟು ಮೊತ್ತವನ್ನು ಸಹಾಯಧನವಾಗಿ ಸರಕಾರದಿಂದ ಪಾವತಿಸಿ, ಬಡ್ಡಿ ಸಬ್ಸಿಡಿಯೆಂದು ನೀಡಲು ಪ್ರಸ್ತಾಪಿಸಲಾಗಿದೆ. ಆದ್ದರಿಂದ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ ಎಂದರು.

ಫಲಾನುಭವಿಗಳ ಸಾಲದ ಮಾಸಿಕ ಕಂತಿನ ಬಡ್ಡಿ ಭಾಗ ದಲ್ಲಿ 3000 ರು.ಗಳ ಮಿತಿಗೆ ಒಳಪಟ್ಟು ಸರಕಾರದಿಂದ ಶೇ.3% ರಿಂದ ಶೇ.5% ರವರಗೆ ಸಹಾಯಧನ ನೀಡಿ, ಸರಕಾರದಿಂದ ಭರಿಸಿ ಫಲಾನುಭವಿಗಳ ಸಾಲದ ಕಂತಿನ ಹೊರೆಯನ್ನು ತಗ್ಗಿ ಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ