Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ್‌ ಹಬ್ಬದ ನಿಮಿತ್ತ ಸಿಂದಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

Advertisement
ಸಿಂದಗಿ: ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಬುಧುವಾರ ಸಂಜೆ ಬಕ್ರೀದ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಸಭೆ ಉದ್ದೇಶಿಸಿ ಮಾತನಾಡಿ,ಪಿಎಸ್ಐ ಭೀಮಪ್ಪ ಅರಭಾವಿ ಬಕ್ರೀದ್‌ ಹಬ್ಬದ ನಿಮಿತ್ತ ಹಿಂದೂ ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ...ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಭೆಯಲ್ಲಿ ಅಪರಾಧ ವಿಭಾಗ ಪಿಎಸ್ಐ ಅರವಿಂದ್ ಅಂಗಡಿ ಮಾತನಾಡಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಪರಸುರಾಮ ಗೋರವಗುಡಂಗಿ,ಜಕ್ಕಪ್ಪ ಕೋರೆ, ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ, ಎಂ,ಎ. ಖತ್ತಿಬ, ಬಸೀರಸಾಭ ಮರ್ತುರ್, ಮಹ್ಮದ್ ಆಳಂದ್, ಇರ್ಫಾನ್ ಬಾಗವಾನ, ಅಬ್ದುಲ್ ರಜಾಕ್ ಮುಜಾವಾರ, ಲುಕ್ಕಮಾನ, ರಹೀಮ್, ಲಕ್ಕಪ್ಪ ಐಬಿ. ರುಕ್ಕು ಮಲಘಾಣ, ರಜತ್ ತಾಂಬೆ, ರಾಜಣ್ಣಿ ನಾರಾಯಣಕರ್ ಸೇರಿದಂತೆ ಮುಸ್ಲಿಂ ಸಮುದಾಯದ ಅನೇಕ ಮುಖಂಡರು ಉಪಸ್ಥಿತಿರಿದ್ದರು.

ವರದಿ: ಗಪೂರ ಮುಜಾವರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ