Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣ ಬಿಸಿಲು: ಫ್ಯಾನ್, ಕೂಲರ್ ಗಳಿಗೆ ಮೋರೆ ಹೋದ ಜನ

Advertisement
ಬೆಂಗಳೂರು, : ಇಷ್ಟು ದಿನ ಕೊರೆಯುವ ಚಳಿಗೆ ನಲುಗಿದ್ದ ಜನಸಾಮಾನ್ಯರು ಈಗ ಸುಡುವ ಬಿಸಿಲಿಗೆ  ಹೈರಾಣಾಗುತ್ತಿದ್ದಾರೆ. ಸೂರ್ಯನ ಶಾಖಕ್ಕೆ ಮನೆಯಿಂದ ಹೊರಗೆ ಬರಲು ಸಹ ಯೋಚನೆ ಮಾಡುವ ಸ್ಥಿತಿ ಬಂದೊದಗಿದೆ. ಇದರ ಪರಿಣಾಮ ಎಸಿ, ಫ್ಯಾನ್, ಕೂಲರ್​​ಗಳ ಮೊರೆ ಹೋಗಿರುವ ಜನರು ತಣ್ಣಗೆ ಇರಲು ನಾನಾ ಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಬೇಡಿಕೆ ಹೆಚ್ಚಾದ ಪರಿಣಾಮ ಫ್ಯಾನ್, ಎಸಿ, ಏರ್ ಕೂಲರ್​​ಗಳ ದರವೂ ಹೆಚ್ಚಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಶಾಖ ಹೆಚ್ಚಾಗಿದ್ದು, ಗರಿಷ್ಠ ತಾಪಮಾನ ದಾಖಲಾಗುತ್ತಿವೆ. ಇತ್ತ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್​​ವರೆಗೂ ವಾತಾವರಣ ಕಂಡುಬರುತ್ತಿದೆ. ಇಷ್ಟು ದಿನ ಚಳಿಗೆ ನಲುಗಿದ್ದ ಜನರು ಈಗ ಬಿಸಿಲ ಝಳಕ್ಕೆ ಸುಸ್ತಾಗಿದ್ದಾರೆ. ಇನ್ನೂ ಏರ್ ಕೂಲರ್, ಫ್ಯಾನ್, ಎಸಿ ಗಳಿಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದ್ದು, ಇಷ್ಟು ದಿನ ಡಲ್ ಹೊಡೆದಿದ್ದ ಇವುಗಳ ವ್ಯಾಪಾರ ಈಗ ಮತ್ತೆ ಗರಿಗೆದರಿದೆ.

ಇನ್ನು ವ್ಯಾಪಾರ ಗರಿಗೆದರಿರುವುದು ವ್ಯಾಪಾರಿಗಳಿಗೆ ಸಮಾಧಾನ ತಂದಿದ್ದರೆ, ಗ್ರಾಹಕರಿಗೆ ಟೆನ್ಶನ್ ಶುರುವಾಗಿದೆ. ಏಕೆಂದರೆ ಕೂಲಿಂಗ್ ಉತ್ಪನಗಳ ಬೆಲೆ ಶೇಕಡಾ 15 ರಿಂದ 20 ರಷ್ಟು ಏರಿಕೆಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆ ಇದೂ ಸಹ ದುಬಾರಿ ಆಗಿರುವುದು ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತೆ ಮಾಡಿದೆ. ಸದ್ಯ ಬಿಸಿಲ ಬೇಗೆ ಸಹಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ ಕೊಳ್ಳುವುದು ಈಗ ಗ್ರಾಹಕರಿಗೆ ಅನಿವಾರ್ಯ ಆಗಲಿದೆ.

ಒಟ್ಟಿನಲ್ಲಿ ಇಷ್ಟು ದಿನ ಡಲ್ ಹೊಡೆದಿದ್ದ ಎಸಿ, ಕೂಲರ್ ಫ್ಯಾನ್​​ಗಳ ವ್ಯಾಪಾರ ವಹಿವಾಟು ಜೋರಾಗಿದ್ದು, ಚಿಕ್ಕಪೇಟೆ ಹಾಗೂ ಹೋಲ್ ಸೇಲ್ ಅಂಗಡಿಗಳಲ್ಲಿ ಗ್ರಾಹಕರ ದಂಡು ಹೆಚ್ಚಾಗಿದೆ. ಆದರೆ ರೇಟ್ ಕೇಳಿ ಅಸಮಾಧಾನ ವ್ಯಕ್ತಪಡಿಸಿದರೂ, ಬೇರೆ ದಾರಿಯಿಲ್ಲದೆ ಖರೀದಿ ಮಾಡುತ್ತಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ