ಬೆಂಗಳೂರು: ಸರ್ಕಾರಿ ನೌಕರ ಎನ್ನುವ ಕಾರಣಕ್ಕೆ ಅವರ ಪ್ರತಿ ವೈಯಕ್ತಿಕ ಮಾಹಿತಿಯನ್ನು ಆರ್.ಟಿ.ಐ. ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ. ನೌಕರರಿಗೂ ವೈಯಕ್ತಿಕ ಗೌಪ್ಯತೆಯ ಹಕ್ಕು ಇರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕೆಎಸ್‌ಆರ್ಟಿಸಿ ನಿವೃತ್ತ ನೌಕರರೊಬ್ಬರ ಆಸ್ತಿ ವಿವರ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಖಾಸಗಿ ವ್ಯಕ್ತಿಗಳ ನಡುವಿನ ಸಿವಿಲ್ ದಾವೆಗಳಿಗೆ ಸಾಕ್ಷ್ಯ ಸಂಗ್ರಹಿಸಲು ಆರ್.ಟಿ.ಐ.ಬಳಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲವೆಂದು ಹೇಳಿದೆ.
ಕೆಎಸ್‌ಆರ್ಟಿಸಿ ನಿವೃತ್ತ ನೌಕರರೊಬ್ಬರ ಆಸ್ತಿ ವಿವರ ಕೋರಿ ಬನಶಂಕರಿಯ ಸವಿತಮ್ಮ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿ ಈ ಆದೇಶ ನೀಡಿದೆ.
ಅರ್ಜಿದಾರರಿಗೆ ಮಾಹಿತಿ ನೀಡಲು ನಿರಾಕರಿಸಿ ರಾಜ್ಯ ಮಾಹಿತಿ ಆಯೋಗ ಮತ್ತು ಕೆಎಸ್‌ಆರ್ಟಿಸಿ ಹೊರಡಿಸಿದ ಆದೇಶಗಳನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಖಾಸಗಿ ವ್ಯಕ್ತಿಗಳ ನಡುವಿನ ಸಿವಿಲ್ ದಾವೆಗೆ ಸಾಕ್ಷ್ಯ ಸಂಗ್ರಹಿಸಲು ಆರ್.ಟಿ.ಐ. ಕಾಯ್ದೆಯನ್ನು ಸಾಧನವಾಗಿ ಬಳಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ. ಅರ್ಜಿದಾರರು ಕೋರಿರುವ ಮಾಹಿತಿ ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

