ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (ಕ್ರೂಡ್ ಆಯಿಲ್) ಬೆಲೆಗಳು ಭಾರಿ ಪ್ರಮಾಣದಲ್ಲಿ ಕುಸಿತ ಕಾಣುತ್ತಿದ್ದರೂ, ಭಾರತದಲ್ಲಿ ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ಇಂಧನ ದರ ಇಳಿಕೆಯಾಗಬಹುದು ಎಂದು ಕಾಯುತ್ತಿದ್ದ ದೇಶದ ವಾಹನ ಸವಾರರಿಗೆ ಭಾರಿ ನಿರಾಸೆಯಾಗಿದೆ.
ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದ ಏರ್ಪಟ್ಟ ಹಿನ್ನೆಲೆಯಲ್ಲಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿಯುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದವನ್ನು ಪ್ರಕಟಿಸಿದ ಬೆನ್ನಲ್ಲೇ ತೈಲ ದರಗಳು ಕುಸಿದಿದ್ದು, ಭಾರತದಲ್ಲೂ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂಬ ವದಂತಿಗಳು ಹರಡಿದ್ದವು.
ಆದರೆ, ಈ ವದಂತಿಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ಸುರೇಶ್ ಗೋಪಿ ಅವರು ತೆರೆ ಎಳೆದಿದ್ದಾರೆ.


