Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯೇ ಮೋದಿ ಅವರ ಅಚ್ಚೇ ದಿನ್? : ಸಿದ್ದರಾಮಯ್ಯ 

Advertisement

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರವನ್ನು ಏರಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ. 

ತೈಲ ಬೆಲೆ ಏರಿಕೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕನೇ ಬಾರಿಗೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 2.61 ರೂ.ಏರಿಕೆಯಾಗಿದೆ. ಡೀಸೆಲ್ ದರ 2.71 ರೂ. ಹೆಚ್ಚಳವಾಗಿದೆ.

ಈ ಬೆಲೆ ಏರಿಕೆಯ ನಂತರ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 110.93 ರೂ. ಹಾಗೂ ಡೀಸೆಲ್ ದರ 98.54 ರೂ. ಆಗಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಅಗುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರುನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಪ್ರಮಾಣದಲ್ಲಿ ಹಿಂದೆಂಡೂ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿರಲಿಲ್ಲ. ಕಳೆದ 11 ದಿನಗಳಲ್ಲಿ 4ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಇದರಿಂದಾಗಿ ಜನ ಸಾಮಾನ್ಯರ ಬದುಕು, ಮಧ್ಯಮ ವರ್ಗದ ಜನರ ಬದುಕು ದುಸ್ಥರವಾಗಿದೆ ಎಂದು ಕಿಡಿಕಾರಿದರು.

ನರೇಂದ್ರ ಮೋದಿ ಅವರು ಹಾಗೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಚೇ ದಿನ್ ಬರುತ್ತೆ ಎಂದು ಬಿಜೆಪಿಯವರು ಈ ದೇಶದ ಜನರಿಗೆ ಟೋಪೊ ಹಾಕುವ ಕೆಲಸಮಾಡಿದರು. ಗುಜರಾತ್ ಮಾಅದರಿ ಸರ್ಕಾರವನ್ನು ಕೇಂದ್ರದಲ್ಲಿ ತರುತ್ತೇವೆ.

ಒಳ್ಳೆಯ ದಿನ ಬರುತ್ತೆ ಎಂದು ಅನೇಕ ಭರವಸೆ ಕೊಟ್ಟರು. ಆದರೆ ಈಗ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಸಲಾಗುತ್ತಿದೆ. ಇದೇನಾ ಮೋದಿ ಅವರ ಅಚ್ಚೇ ದಿನ್? ಎಂದು ಪ್ರಶ್ನಿಸಿದರು.

ಈ ಹಿಂದೆ ಯುಪಿಎ ಸರ್ಕಾರದಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಪೆಟ್ರೋಲ್, ಡೀಸೆಲ್ ದರ ಎಷ್ಟಿತ್ತು? ಕೊಂಚ ದರ ಏರಿಸಿದರೂ ಬಿಜೆಪಿ ನಾಯಕರು ಹಾಗೂ ಅಂದು ಗುಜರಾತ್ ಸಿಎಂ ಆಗಿದ್ದಾಗ ಏನೆಲ್ಲ ಮಾತನಾಡಿದರು ಎಂಬುದು ದೇಶದ ಜನತೆಗೆ ಗೊತ್ತಿದೆ.

ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆಯೂ ಏರುತ್ತಿದೆ ಈ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಲೀಟರ್ .ಪೆಟ್ರೋಲ್ ಬೆಲೆ 110.93 ಪೈ. ಡೀಸೆಲ್ 98.54 ಪೈಸೆ ಆಗಿದೆ. ಈ ಹಿಂದೆ ಎಂದೂ ಈ ಮಟ್ಟದಲ್ಲಿ ಪೆಟ್ರೋಲ್ ದರ ಏರಿಕೆಯಾಗಿರಲಿಲ್ಲ. ಡೀಸೆಲ್ ದರ ಮುಂದಿನ ದಿಬಗಳಲ್ಲಿ ನೂರು ರೂಪಾಯಿ ದಾಅಟಿದರೂ ಅಚ್ಚರಿ ಇಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದರ ಏರಿಕೆ ಮೂಲಕ ಹೇಗೆಲ್ಲ ಈ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂಬುದನ್ನು ಜನರು ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಪುರುಷನ ಜೊತೆ ಅಕ್ರಮ ಸಂಬಂಧ : ಅಕ್ಕನನ್ನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯೇ ಮೋದಿ ಅವರ ಅಚ್ಚೇ ದಿನ್? : ಸಿದ್ದರಾಮಯ್ಯ ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಮೊಬೈಲ್ ನಲ್ಲಿ ಖಾಸಗಿ ಫೋಟೋ ಪತ್ತೆ ವಿ ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮಟ್ಯೂಷನ್ ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಸಚಿವ ಡಾ. ಶರಣಾಪ್ರಕಾಶ್ ಪಾಟೀಲ್ ತವರೂರಲ್ಲೇ ಕಳಪೆ ಮಟ್ಟದ ಡಾಂಬರೀಕರಣ ರಸ್ತೆ ನಿರ್ಮಾಣಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪರಿಶೀಲನ ಸಭೆ  ಅಪ್ಪಯ್ಯ ಸ್ವಾಮಿಗಳ ಶತಮಾನೋತ್ಸಕ್ಕೆ ಹಿರಿದು ಬರುತ್ತಿದೆ ದೇಣಿಗೆ  ಸಿಗ್ನಲ್ ಗಳು ಇಲ್ಲದೆ ಟ್ರಾಫಿಕ್ ಜಾಮ್ ಆಗುತ್ತಿರುವ  ಮುಖ್ಯ ರಸ್ತೆಗಳುದೆಹಲಿ ಕ್ಯಾಪಿಟಲ್ಸ್ಗೆ ೪೦ ರನ್‌ಗಳ ಸುಲಭ ಜಯ