LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Advertisement
ಯಾದಗಿರಿ: ಸ್ವಘೋಷಿತ ದೇವಮಾನವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬುಧವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶೀಧರ್ ಕೋಸುಂಬೆ ದಾಖಲಿಸಿಕೊಂಡ ಸ್ವಯಂ ದೂರಿನ ಅನ್ವಯ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರ ಸುದ್ದಿಯಾಗಿತ್ತು, ಇದೀಗ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಸಿಡಿಪಿಒ ಅವರ ದೂರು ಮೇರೆಗೆ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇನ್ನು ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಒಂದು ಬಿಡುಗಡೆ ಮಾಡಿದ್ದು, "ಮಗಳು ಎಂಬ ಭಾವನೆಯಲ್ಲಿ ಆ ಬಾಲಕಿಯೊಡನೆ ಪ್ರೀತಿಯಿಂದ ನಡೆದುಕೊಂಡಿದ್ದೇನೆ ವಿನಹ ಯಾವುದೇ ಕೆಟ್ಟ ಉದ್ದೇಶ ಖಂಡಿತವಾಗಿ ಇಲ್ಲ. ಕಾನೂನು ಹೋರಾಟದಲ್ಲಿ ನನಗೆ ಖಂಡಿತ ಜಯ ದೊರಕಲಿದೆ. ಇದು ನನ್ನದೇ ಗೆಲುವು, ನಾನೇ ಗೆಲ್ಲುವೆ, ಭಕ್ತರು ಯಾರೂ ಆತಂಕಕ್ಕೆ ಒಳಗಾಗಗಬೇಡಿ" ಎಂದು ಸ್ಪಷ್ಟನೆ ನೀಡಿದ್ದಾನೆ.

ಪೋಕ್ಸೋ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಮುತ್ಯಾನ ಬೆಂಬಲಿಗರು 'We Stand With Mallikarjun Mutya' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ