LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪೋಕ್ಸೋ ಕೇಸ್ : ಮಲ್ಲಿಕಾರ್ಜುನ ಮುತ್ಯಾಗೆ ಹೈಕೋರ್ಟ್ ದೊಡ್ಡ ಮಟ್ಟದ ರಿಲೀಫ್

Advertisement

ಬೆಂಗಳೂರು: ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ಅವರಿಗೆ ಹೈಕೋರ್ಟ್ ದೊಡ್ಡ ಮಟ್ಟದ ರಿಲೀಫ್ ನೀಡಿದೆ. ಈ ಪ್ರಕರಣದ ತನಿಖೆಗೆ ನ್ಯಾಯಾಲಯವು ತಡೆಯಾಜ್ಞೆ ನೀಡುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.


ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಸೂಚಿಸಿದೆ.


ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಈ ತಡೆಯಾಜ್ಞೆ ನೀಡಿದೆ.


ಈ ಹಿಂದೆ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು ಮತ್ತು ಈ ಸಂಬಂಧ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆದೇಶದಿಂದಾಗಿ ಸದ್ಯಕ್ಕೆ ಮಲ್ಲಿಕಾರ್ಜುನ ಮುತ್ಯಾ ಅವರಿಗೆ ಬಂಧನದ ಭೀತಿ ತಪ್ಪಿದಂತಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ