ಬೆಂಗಳೂರು: ಪೋಕ್ಸೋ (POCSO) ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶ ಪ್ರಕಟಿಸಿದೆ.
ಆದರೆ, ಶ್ರೀಗಳಿಗೆ ರೆಗ್ಯೂಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿರುವ ಕೋರ್ಟ್, ಅಲ್ಲಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದೆ ಎಂದು ತಿಳಿಸಿದೆ. ಇದರಿಂದಾಗಿ ಸದ್ಯದ ಮಟ್ಟಿಗೆ ಸ್ವಾಮೀಜಿ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ.


