LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಆರ್.ಅಶೋಕ್ ಕಿಡಿ

Advertisement

ಬೆಂಗಳೂರು: ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದೆ.

ಎಸ್ ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ರಾಜಭವನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ.

ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರನ್ನು ಅನವಶ್ಯಕವಾಗಿ ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಯಾರು ಬೇಕಾದರೂ ಫಾರ್ಮ್‌ 7 ಸಲ್ಲಿಸಬಹುದು ಹಾಗೂ ಪ್ರಕರಣ ದಾಖಲಿಸಲು ಯಾರಿಗೂ ಹೇಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದರೆ ಅದನ್ನು ಮತದಾರರು ಪ್ರಶ್ನೆ ಮಾಡಬಹುದು. ಇಲ್ಲಿ ಪೊಲೀಸರು ಅಥವಾ ಸರ್ಕಾರ ಮಧ್ಯಪ್ರವೇಶ ಮಾಡುವಂತಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಪೊಲೀಸರ ಮೂಲಕ ಫಾರ್ಮ್‌ 7 ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುತ್ತಿದೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ಹಾಲಿನ ದರ ಏರಿಕೆ ಫಿಕ್ಸ್ : ಲೀಟರ್‌ಗೆ ₹8 ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ಸೌರವ್ ಗಂಗೂಲಿ ದೆಹಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಆರ್.ಅಶೋಕ್ ಕಿಡಿಅಯ್ಯೋ ಸಿಎಂ ತುಂಬಾ ಬ್ಯೂಸಿ, ನನ್ನ ಫೋನ್​​ಗೂ ಸಿಗಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಬಿ ಹುದ್ದೆ : ಜಿ. ಪರಮೇಶ್ವರ್ ಘೋಷಣೆಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದವರಿಗೆ 1 ಕೋಟಿ, ಬೆಳ್ಳಿ ಗೆದ್ದವರಿಗೆ ₹75 ಲಕ್ಷ ನಗದು : ಸಿಎಂ ಘೋಷಣೆ ನಾಯಕತ್ವ ಸ್ಥಾನದಿಂದ ಹಿಂದೆ ಸರಿದ ಹರಮನ್ ಪ್ರೀತ್ ಕೌರ್ ಪಾವಗಡದಲ್ಲಿ 'ದಳ-ಕಮಲ' ಜಂಟಿ ರಣಕಹಳೆ:ತಹಶೀಲ್ದಾರ್ ಕಚೇರಿಗೆ ಮನವಿ ಪತ್ರ ಕೊಡುವುದಕ್ಕೆ  ಜನಸಾಗರ!ನೈಜೀರಿಯಾದಲ್ಲಿ ಸೇನಾ ವಿಮಾನ ಪತನ : 32 ಮಂದಿ ಸಾವು