Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರ ಫೋಟೋಗಳ ಅಶ್ಲೀಲ ಎಡಿಟ್ ಆರೋಪದ ಮೇಲೆ ವ್ಯಕ್ತಿ ಬಂಧನ

Advertisement

ಬೆಂಗಳೂರು: ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು ಸಂಗ್ರಹಿಸಿ ಅಶ್ಲೀಲವಾಗಿ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡುತ್ತಿದ್ದ ಮಾಜಿ ಉದ್ಯೋಗಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಶಿಶ್ ಮೊನ್ನಪ್ಪ ಬಂಧಿತ ಆರೋಪಿ.


ಮಡಿಕೇರಿಯ ಈತ ಹೊಸೂರಿನಲ್ಲಿ ಹೆಂಡತಿ-ಮಕ್ಕಳೊಂದಿಗೆ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಜಕ್ಕೂರಿನ ಬಾಡಿಗೆ ಮನೆಯೊಂದರಲ್ಲಿ ಒಬ್ಬನೇ ನೆಲೆಸಿದ್ದ. ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ದೂರು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


2023ರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಆರೋಪಿ, ಕಳೆದ ಜನವರಿಯಲ್ಲಿ ಕೆಲಸ ತೊರೆದಿದ್ದ. ಬೇರೆ ಕಂಪನಿಗಳಿಗೆ ರೆಸ್ಯೂಮ್ ಕಳುಹಿಸಲು ಹಳೆ ಕಂಪನಿಯ ಮಹಿಳಾ ಸಹೋದ್ಯೋಗಿಯಿಂದ ಲ್ಯಾಪ್​ಟಾಪ್ ಪಡೆದುಕೊಂಡಿದ್ದ. ಕೆಲ ದಿನಗಳ ನಂತರ ಆರೋಪಿಯು ಸ್ನೇಹಿತೆಗೆ ಲ್ಯಾಪ್​ಟಾಪ್ ವಾಪಸ್ ನೀಡಿದ್ದ. ಲ್ಯಾಪ್​ಟಾಪ್ ನೀಡುವಾಗ ಅಸಭ್ಯವಾಗಿ ಮಹಿಳೆಯರ ಫೋಟೋಗಳನ್ನು ಎಡಿಟ್ ಮಾಡಿಟ್ಟುಕೊಂಡಿದ್ದ ಫೋಲ್ಡರ್ ಡಿಲೀಟ್ ಮಾಡುವುದನ್ನು ಮರೆತಿದ್ದ.


ಸ್ನೇಹಿತೆಯು ಲ್ಯಾಪ್​ಟಾಪ್ ನೋಡಿದಾಗ ಕಂಪನಿಯ ಸಹೋದ್ಯೋಗಿಗಳ ಅಶ್ಲೀಲ ಮಾರ್ಫ್ ಚಿತ್ರಗಳನ್ನು ಕಂಡು ಶಾಕ್ ಆಗಿದ್ದರು. ಈ ಬಗ್ಗೆ ಕರೆ ಮಾಡಿ ಕರೆಸಿಕೊಂಡು ಪ್ರಶ್ನಿಸಿದಾಗ, ಆರೋಪಿ ಆತಂಕಗೊಂಡು ಸ್ಥಳದಲ್ಲೇ ಮೊಬೈಲ್ ಬಿಟ್ಟು ಪರಾರಿಯಾಗಿದ್ದ. ಈ ಸಂಬಂಧ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







ಮಾಜಿ ಸಹೋದ್ಯೋಗಿಗಳೂ ಸೇರಿದಂತೆ ಹಲವು ಮಹಿಳೆಯರ ಫೋಟೋಗಳನ್ನು ತಿರುಚಿ ನಕಲಿ ಬೆತ್ತಲೆ ಫೋಟೋಗಳಿರುವ ರೀತಿ ಎಡಿಟ್ ಮಾಡುತ್ತಿದ್ದ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಟೆಲಿಗ್ರಾಮ್​ನಲ್ಲಿ ಅಪ್​ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ