ಮೈಸೂರು: ರಾಜ್ಯದ ಸುಮಾರು 500 ಕಾಂಗ್ರೆಸ್ ಕಾರ್ಯಕರ್ತರಿಗೆ ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ನಿರ್ದೇಶಕರು ಹಾಗೂ ಸದಸ್ಯರಾಗಿ ನೇಮಕ ಮಾಡಿ ಅಧಿಕಾರ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಲ್ಲಿ ಶನಿವಾರ ಮಹತ್ವದ ಹೇಳಿಕೆ ನೀಡಿದ್ದಾರೆ.
"ಈಗಾಗಲೇ ನಾನು ನೇಮಕಾತಿ ಪಟ್ಟಿಗೆ ಸಹಿ ಹಾಕಿದ್ದು, ಪ್ರಸ್ತುತ ವರ್ಗೀಕರಣ ಕಾರ್ಯ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣವೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು" ಎಂದು ಅವರು ತಿಳಿಸಿದರು.
ಈ ಅಧಿಕಾರ ಹಂಚಿಕೆಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ ಅವರು, ಮೊದಲ ಹಂತದಲ್ಲಿ ಸದಸ್ಯರು ಹಾಗೂ ನಿರ್ದೇಶಕರ ನೇಮಕ ಪೂರ್ಣಗೊಳ್ಳಲಿದೆ.
ತದನಂತರದ ಎರಡನೇ ಹಂತದ ಪಟ್ಟಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಎಲ್ಲ ಪ್ರಕ್ರಿಯೆಗಳು ಈಗ ಅಂತಿಮ ಹಂತ ತಲುಪಿವೆ. ಕಾರ್ಯಕರ್ತರಷ್ಟೇ ಅಲ್ಲದೆ, ಪಕ್ಷದ ಕೆಲವು ಶಾಸಕರಿಗೂ ಈ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ನೀಡಬೇಕಿದ್ದು, ಅವರಿಗೂ ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.


