Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿ ಒಂದು ನಾಟಕವಷ್ಟೇ : ಪ್ರಹ್ಲಾದ ಜೋಶಿ

Advertisement
ಕಲಬುರ್ಗಿ: ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಡ್ರಾಮಾ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ಪಂಡಿತ್‌ ನೆಹರು ಕಾಲದಿಂದಲೂ ಕಾಂಗ್ರೆಸ್‌ ಮೀಸಲಾತಿ ವಿರೋಧಿ ಆಗಿಯೇ ನಡೆದುಕೊಂಡಿದೆ.

ಮೀಸಲಾತಿ ವಿರೋಧಿಸಿ ನೆಹರು ಪತ್ರವನ್ನೇ ಬರೆದಿದ್ದರು. ಇನ್ನು, ರಾಜೀವ್‌ ಗಾಂಧಿ ಸಹ ಮೀಸಲಾತಿ ವಿರುದ್ಧ ಸಂಸತ್‌ನಲ್ಲಿ ಸುದೀರ್ಘ ಭಾಷಣ ಬಿಗಿದಿದ್ದರು ಎಂದು ನೆನಪಿಸಿದರು.

ಈಗ ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಟೀಕಿಸಿದರು.

ಇತಿಹಾಸದಲ್ಲಿ ಯಾವತ್ತೂ ಕಾಂಗ್ರೆಸ್ ಮುಖಂಡರು ಮೀಸಲಾತಿ ಪರ ನಿಂತಿದ್ದಿಲ್ಲ. ಸಂವಿಧಾನದಲ್ಲಿ ಅಂಬೇಡ್ಕರ್‌ ಮೀಸಲಾತಿ ಕಲ್ಪಿಸಿದರೆ, ಕಾಂಗ್ರೆಸ್‌ ಅಧಿನಾಯಕರು ಸಂಸತ್ ನಲ್ಲಿ ಮೀಸಲಾತಿ ವಿರೋಧಿಸಿ ಉದ್ದುದ್ದ ಭಾಷಣ ಮಾಡಿದರು.

ಈಗ ಜಾತಿ ಗಣತಿ, ಮೀಸಲಾತಿ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ ಸಚಿವರು, ಇದೊಂದು ರಾಜಕೀಯ ನಾಟಕವಾಗಿದೆ ಎಂದರು.
ಇನ್ನು ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ.

ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿಸಿಎ ಸಮಗ್ರ ತನಿಖೆ ನಡೆಸಲಿದೆ. ಭವಿಷ್ಯದಲ್ಲಿ ಇಂಥ ಅವಘಡಗಳು ಘಟಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.
ಕೇಂದ್ರ ಸರ್ಕಾರ, ವಿಮಾ ಕಂಪನಿ ಮತ್ತು ವಿಮಾನ ಸಂಸ್ಥೆಗಳಿಂದ ಸಮರ್ಪಕ ಪರಿಹಾರ ನೀಡಲಾಗುತ್ತದೆ. ಅಲ್ಲದೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ