Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೂ ಯೋಗ್ಯವಲ್ಲ : ವರದಿ ಬಹಿರಂಗ 

Advertisement
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ.

ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ಅತ್ಯಂತ ಕಲುಷಿತವಾಗಿದ್ದು, ಸ್ನಾನಕ್ಕೂ ಯೋಗ್ಯವಲ್ಲ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ.

ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳ ಸಂಖ್ಯೆ ನೀರಿನಲ್ಲಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗಿದೆ. ತ್ರಿವೇಣಿ ಸಂಗಮ ಸೇರಿ ಪ್ರಯಾಗ್ ರಾಜ್ ನ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ನೀರಿನ ಮಾದರಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಗೆ ಒಳಪಡಿಸಿ ಈ ವಿಷಯವನ್ನು ದೃಢಪಡಿಸಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನ ಗುಣಮಟ್ಟ ಕುರಿತ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣಕ್ಕೆ ಸಲ್ಲಿಸಿದ್ದು, ನ್ಯಾಯಾಧಿಕರಣ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮಾತ್ರವಲ್ಲ, ಉತ್ತರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಕಲುಷಿತ ನೀರಿನಲ್ಲಿ 50 ಕೋಟಿ ಜನ ಸ್ನಾನ ಮಾಡುವಂತೆ ಮಾಡಿದ್ದೀರಿ. ಸ್ನಾನಕ್ಕೂ ಯೋಗ್ಯವಲ್ಲದ ನೀರನ್ನು ಜನ ಕುಡಿಯಲು ಬಳಸಬೇಕೇ ಎಂದು ತರಾಟೆಗೆ ತೆಗೆದುಕೊಂಡಿದ್ದು, ವಿಸ್ತೃತ ವರದಿ ಸಲ್ಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ