LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

200 ಕೋಟಿ ವೆಚ್ಚದ 18 ಅಂತಸ್ತಿನ ಕಟ್ಟಡ ಧ್ವಂಸಗೊಳಿಸಲು ಸಿದ್ಧತೆ

Advertisement

ಬೆಂಗಳೂರು: ಕೂಡ್ಲುಗೇಟ್‌ನಲ್ಲಿರುವ ಎಸ್‌ಎನ್‌ಎಸ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡವನ್ನು ವ್ಯವಸ್ಥಿತವಾಗಿ ತೆರವುಗೊಳಿಸುವ ಪ್ರಕ್ರಿಯೆಯು ಶುಕ್ರವಾರದಿಂದ ಪ್ರಾರಂಭವಾಗಿದೆ.

ಬೆಂಗಳೂರಿನ ಅತ್ಯಂತ ಗಮನ ಸೆಳೆದಿರುವ ವಸತಿ ಪುನರ್ನಿರ್ಮಾಣ ಯೋಜನೆಗಳಲ್ಲಿ ಒಂದರಲ್ಲಿ ಮಹತ್ವದ ಮೈಲಿಗಲ್ಲಾಗಿ, ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ (ಒಟ್ಟು 972 ಮನೆಗಳನ್ನು ಒಳಗೊಂಡಿರುವ ಪ್ರೀಮಿಯಂ ವಸತಿ ಯೋಜನೆ) ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ವಿಧಾನದಲ್ಲಿ ಕೆಡವುವ ಪ್ರಕ್ರಿಯೆ ಪ್ರಾರಂಭಿಸಿದೆ.

ಸುಮಾರು 200 ಕೋಟಿ ರೂ.ವೆಚ್ಚದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು.

ಈ ಕುರಿತು ಎಸ್‌ ಎನ್‌ಎನ್‌ ಅಪಾರ್ಟ ಮೆಂಟ್‌ ನಿರ್ದೇಶಕ ಅನೂಜ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮುಂಬೈನ ಖಾಸಗಿ ಕಂಪನಿಗೆ ತೆರವು ಮಾಡಲು ಗುತ್ತಿಗೆ ಕೊಟ್ಟಿದ್ದೇವೆ. ಯಾವುದೇ ರೀತಿ ಸಮಸ್ಯೆ ಆಗುವುದಿಲ್ಲ. ಫ್ಲ್ಯಾಟ್‌ ಬೈ ಫ್ಲ್ಯಾಟ್‌ ತೆರವುಗೊಳಿಸುತ್ತೇವೆ.

ನಾವೇ ಬಿಬಿಎಂಪಿಗೆ ಪತ್ರ ಬರೆದಿದ್ದೇವೆ. ಶುಕ್ರವಾರದಿಂದ ತೆರವು ಕಾರ್ಯ ಆರಂಭವಾಗಿದೆ. ಅಪಾರ್ಟಮೆಂಟ್‌ ಹೀಗೆ ಇದ್ರೂ ಏನೂ ಆಗಲ್ಲ. ಆದರೆ ನಾವು ಅಪಾರ್ಟ್‌ ಮೆಂಟ್‌ ತೆರವು ಗೊಳಿಸುತ್ತೇವೆ.

ಮತ್ತೆ ಇದೇ ಜಾಗದಲ್ಲಿ ಹೊಸ ಅಪಾರ್ಟಮೆಂಟ್‌ ಕಟ್ಟುತ್ತೇವೆ. ಫ್ಲ್ಯಾಟ್‌ ಗಳು ಮುಂಚಿತವಾಗಿಯೇ ಮುಂಗಡ ಬುಕ್‌ ಆಗಿತ್ತು. ಈಗ ನಾವು ಅವರು ಜೊತೆ ಮಾತಾಡಿ ಸರಿಪಡಿಸುತ್ತೇವೆ. ಯಾರಿಗೂ ಸಮಸ್ಯೆ ಆಗದಂತೆ ತೆರವುಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್