Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಸೇರಿ ಸಹಚರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ 

Advertisement
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಸಾಕ್ಷ್ಯಗಳ ಒಟ್ಟುಗೂಡಿಸುವಿಕೆ, ತಂತ್ರಜ್ಞಾನ ಬಳಸಿ ಕಲೆಹಾಕಿರುವ ಕೊಲೆ ಸಂಬಂಧಿತ ಅಂಶಗಳು, ಕೊಲೆಯಲ್ಲಿ ಆರೋಪಿಗಳ ಪಾತ್ರ, ಅವರ ವಿರುದ್ಧ ಇರುವ ಸಾಕ್ಷ್ಯಗಳು ಸೇರಿದಂತೆ ಎಲ್ಲವನ್ನೂ ವಿಸ್ತರವಾಗಿ ಚಾರ್ಜ್ ಶೀಟ್ ನಲ್ಲಿ ಸೇರಿದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎಫ್ ಎಸ್ ಎಲ್ ಗೆ ಕಳುಹಿಸಲಾಗಿರುವ ಕೆಲವು ಸಾಕ್ಷ್ಯಗಳ ವರದಿ ಶೀಘ್ರವೇ ಬರಲಿದ್ದು, ಮುಖ್ಯವಾಗಿ ಪಟ್ಟಣಗೆರೆ ಶೆಡ್ ನಲ್ಲಿ ಸಿಕ್ಕ 2 ಮಾದರಿಗಳು, ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್, ಪವಿತ್ರಾಗೌಡ, ನಟ ದರ್ಶನ್ ಮನೆಯ ಸಿಸಿಟಿವಿಯ ವಿಡಿಯೋಗಳು, ಪಟ್ಟಣಗೆರೆ ಶೆಡ್ ನ ಸೆಕ್ಯೂರಿಟಿ ಗಾರ್ಡ್ ಸಿಸಿಟಿವಿ ದೃಶ್ಯವಳಿಗಳು, ಕೊಲೆ ಆರೋಪಿಗಳ ಮೊಬೈಲ್ ಮಾಹಿತಿ ಕುರಿತು ಎಫ್ ಎಸ್ ಎಲ್ ವರದಿ ಬರಲಿದೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸಿಸಿಟಿವಿ ವಿಡಿಯೋ ಜೊತೆಗೆ ಫೋಟೋ ಮ್ಯಾಚಿಂಗ್ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಗಳ ವಿಶೂವಲ್ ಕಂಪ್ಯಾರಿಸನ್ ಗೆ ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದು, ಸಿಸಿಟಿವಿ ದೃಶ್ಯದ ಜೊತೆಗೆ ಆರೋಪಿಗಳ ಫೋಟೋಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಎಲ್ಲಾ ಆರೋಪಿಗಳ ಕಣ್ಣು, ಬಣ್ಣ, ದೇಹ, ಬಾಯಿ, ತುಟಿ, ಮೂಗಿನ ಶೇಪ್ ಗಳ ಕಂಪ್ಯಾರಿಸನ್ ಮಾಡಲು ಮುಂದಾಗಿದೆ ಎನ್ನಲಾಗಿದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ